ಜೆಪಿಯ ಹಾಲಿ ಶಾಸಕ ಸತೀಶ್ ರೆಡ್ಡಿ ಮತ್ತೆ ಟಿಕೆಟ್ ಪಡೆಯಲಿದ್ದಾರೆ. ಕಾಂಗ್ರೆಸ್‌ನಲ್ಲಿ ಪ್ರಭಾವಿ ಸಚಿವ ರಾಮಲಿಂಗಾರೆಡ್ಡಿ ಅವರ ಆಪ್ತ ನಾಗಭೂಷಣ್ ರೆಡ್ಡಿ ಹಾಗೂ ಸ್ಥಳೀಯ ಮುಖಂಡರಾದ ಕವಿತಾ ರೆಡ್ಡಿ ಟಿಕೆಟ್‌ಗಾಗಿ ಪೈಪೋಟಿ ನಡೆಸಿದ್ದಾರೆ.

ಬೆಂಗಳೂರು : ಬಿಜೆಪಿಯ ಹಾಲಿ ಶಾಸಕ ಸತೀಶ್ ರೆಡ್ಡಿ ಮತ್ತೆ ಟಿಕೆಟ್ ಪಡೆಯಲಿದ್ದಾರೆ. ಕಾಂಗ್ರೆಸ್‌ನಲ್ಲಿ ಪ್ರಭಾವಿ ಸಚಿವ ರಾಮಲಿಂಗಾರೆಡ್ಡಿ ಅವರ ಆಪ್ತ ನಾಗಭೂಷಣ್ ರೆಡ್ಡಿ ಹಾಗೂ ಸ್ಥಳೀಯ ಮುಖಂಡರಾದ ಕವಿತಾ ರೆಡ್ಡಿ ಟಿಕೆಟ್‌ಗಾಗಿ ಪೈಪೋಟಿ ನಡೆಸಿದ್ದಾರೆ.

ನಾಗಭೂಷಣ್ ರೆಡ್ಡಿ ಅವರು ಈಗಾಗಲೇ ಬೊಮ್ಮನಹಳ್ಳಿ ಕ್ಷೇತ್ರದಲ್ಲಿ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿದ್ದರೆ, ಕವಿತಾ ರೆಡ್ಡಿ ಸಹ ಈ ವಿಚಾರದಲ್ಲಿ ಪೈಪೋಟಿ ನೀಡತೊಡಗಿದ್ದಾರೆ.

ನಾಗಭೂಷಣ್ ರೆಡ್ಡಿ ಅವರು ಕಳೆದ ಬಾರಿ ಸತೀಶ್ ರೆಡ್ಡಿ ವಿರುದ್ಧ ಸ್ಪರ್ಧಿಸಿ, ಎರಡನೇ ಸ್ಥಾನ ಪಡೆದಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಇಂಧನ ಸಚಿವ ಡಿ.ಕೆ. ಶಿವಕುಮಾರ್ ಮೂಲಕ ಕವಿತಾ ಅವರು ಟಿಕೆಟ್‌ಗಾಗಿ ಪೈಪೋಟಿ ನಡೆಸಿದ್ದಾರೆ.

ಹೀಗಾಗಿ ಈ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಇನ್ನೂ ಅಂತಿಮಗೊಂಡಿಲ್ಲ. ಅದೇ ರೀತಿ ಜೆಡಿಎಸ್‌ನಿಂದ ಇನ್ನು ಅಭ್ಯರ್ಥಿ ಆಯ್ಕೆಯಾಗಿಲ್ಲ.