ದೇವನಹಳ್ಳಿಯಲ್ಲಿ ಕಾಂಗ್ರೆಸ್’ನಿಂದ ಯಾರಿಗೆ ಸಿಗಲಿದೆ ಟಿಕೆಟ್..?

First Published 7, Mar 2018, 12:25 PM IST
Who Is the Congress Candidate Frome Devanahalli
Highlights

ಬಿಜೆಪಿಯಿಂದ ಈ ಕ್ಷೇತ್ರದಲ್ಲಿ ಬಿ.ಆರ್. ನಾರಾಯಣಸ್ವಾಮಿ ಮತ್ತು ಮಾಜಿ ಶಾಸಕ ಚಂದ್ರಣ್ಣ ಆಕಾಂಕ್ಷಿ. ಇನ್ನು ಜೆಡಿಎಸ್‌ನಿಂದ ಹಾಲಿ ಶಾಸಕ ಪಿಳ್ಳಮುನಿಶಾಮಪ್ಪ ಅವರಿಗೆ ಈಗಾಗಲೇ ಟಿಕೆಟ್ ಘೋಷಣೆ ಮಾಡಲಾಗಿದೆ. ಕಾಂಗ್ರೆಸ್‌ನಿಂದ ಕಳೆದ ಬಾರಿ ಟಿಕೆಟ್ ಪಡೆದು ಪರಾಜಿತರಾಗಿದ್ದ ವೆಂಕಟಸ್ವಾಮಿ ಮತ್ತೆ ಟಿಕೆಟ್ ಆಕಾಂಕ್ಷಿ ಯಾಗಿದ್ದಾರೆ.

ದೇವನಹಳ್ಳಿ : ಬಿಜೆಪಿಯಿಂದ ಈ ಕ್ಷೇತ್ರದಲ್ಲಿ ಬಿ.ಆರ್. ನಾರಾಯಣಸ್ವಾಮಿ ಮತ್ತು ಮಾಜಿ ಶಾಸಕ ಚಂದ್ರಣ್ಣ ಆಕಾಂಕ್ಷಿ. ಇನ್ನು ಜೆಡಿಎಸ್‌ನಿಂದ ಹಾಲಿ ಶಾಸಕ ಪಿಳ್ಳಮುನಿಶಾಮಪ್ಪ ಅವರಿಗೆ ಈಗಾಗಲೇ ಟಿಕೆಟ್ ಘೋಷಣೆ ಮಾಡಲಾಗಿದೆ. ಕಾಂಗ್ರೆಸ್‌ನಿಂದ ಕಳೆದ ಬಾರಿ ಟಿಕೆಟ್ ಪಡೆದು ಪರಾಜಿತರಾಗಿದ್ದ ವೆಂಕಟಸ್ವಾಮಿ ಮತ್ತೆ ಟಿಕೆಟ್ ಆಕಾಂಕ್ಷಿ ಯಾಗಿದ್ದಾರೆ.

ಆದರೆ, ಕ್ಷೇತ್ರದಲ್ಲಿ ಹಲವು ಬಾರಿ ಸೋಲುಂಡಿರುವುದು ಅವರಿಗೆ ಅಡ್ಡಿಯಾಗುವ ಸಾಧ್ಯತೆಯಿದೆ. ಹೀಗಾಗಿ ಪ್ರಮುಖ ದಲಿತ ನಾಯಕ ಛಲವಾದಿ ನಾರಾಯಣಸ್ವಾಮಿ ಅವರ ಹೆಸರು ಪ್ರಧಾನವಾಗಿ ಕೇಳಿಬರತೊಡಗಿದೆ.

ದಲಿತ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಹಾಗೂ ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇ ಶ್ವರ್ ಅವರ ಬೆಂಬಲವನ್ನು ಛಲವಾದಿ ಈಗಾಗಲೇ ಗಿಟ್ಟಿಸಿದ್ದಾರೆ ಎನ್ನಲಾಗುತ್ತಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಡ್ಡಿಯಾಗದಿದ್ದರೆ ಈ ಕ್ಷೇತ್ರದಿಂದ ಛಲವಾದಿ ನಾರಾಯಣ ಸ್ವಾಮಿ ಈ ಬಾರಿ ಕಾಂಗ್ರೆಸ್ ಟಿಕೆಟ್‌ನಿಂದ ಸ್ಪರ್ಧಿಸುವ ಸಾಧ್ಯತೆ ಹೆಚ್ಚು ಎನ್ನಲಾಗುತ್ತಿದೆ.

loader