ಬಿಜೆಪಿಯಿಂದ ರಾಜ್ಯಸಭೆ ಚುನಾವಣೆಗೆ ಅಂತಿಮವಾಗದ ಅಭ್ಯರ್ಥಿ

First Published 6, Mar 2018, 11:11 AM IST
Who Is The Karnataka BJP Candidate For Rajya Sabha Election
Highlights

ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆಯುವ ಚುನಾವಣೆಯಲ್ಲಿ ಬಿಜೆಪಿಗೆ ಲಭಿಸಬಹುದಾದ ಒಂದು ಸ್ಥಾನಕ್ಕೆ ಇದುವರೆಗೆ ಯಾರನ್ನು ಕಣಕ್ಕಿಳಿಸಬೇಕು ಎಂಬುದರ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳಲಾಗಿಲ್ಲ.

ಬೆಂಗಳೂರು: ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆಯುವ ಚುನಾವಣೆಯಲ್ಲಿ ಬಿಜೆಪಿಗೆ ಲಭಿಸಬಹುದಾದ ಒಂದು ಸ್ಥಾನಕ್ಕೆ ಇದುವರೆಗೆ ಯಾರನ್ನು ಕಣಕ್ಕಿಳಿಸಬೇಕು ಎಂಬುದರ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳಲಾಗಿಲ್ಲ. ಈ ಸಂಬಂಧ ಹೈಕಮಾಂಡ್ ಕೈಗೊಳ್ಳುವ ನಿರ್ಧಾರಕ್ಕೆ ಬದ್ಧ ಎಂಬ ನಿರ್ಣಯವನ್ನು ಕೈಗೊಂಡಿರುವ ಪಕ್ಷದ ರಾಜ್ಯ ಕೋರ್ ಕಮಿಟಿಯು ವರಿಷ್ಠರು ಅಭಿಪ್ರಾಯ ಕೇಳಿದರೆ ಹಲವು ಹೆಸರುಗಳನ್ನು ಪ್ರಸ್ತಾಪಿಸಲು ಮುಂದಾಗಿದೆ.

ಈ ನಡುವೆ ಭಾನುವಾರ ನಡೆದ ಕೋರ್ ಕಮಿಟಿ ಸಭೆಯ ಸಂದರ್ಭ ಈಗ ತೆರವುಗೊಳಿಸುತ್ತಿರುವ ಪಕ್ಷೇತರ ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್, ಮಾಜಿ ಸಂಸದರಾದ ವಿಜಯ್ ಸಂಕೇಶ್ವರ್, ತೇಜಸ್ವಿನಿ ಗೌಡ ಹೆಸರುಗಳು ಅನೌಪಚಾರಿಕವಾಗಿ ಚರ್ಚೆಗೆ ಬಂದಿವೆ. ಆದರೆ, ಸಮಯದ ಅಭಾವದಿಂದ ಈ ಬಗ್ಗೆ ಹೆಚ್ಚು ಚರ್ಚಿಸದೆ ವರಿಷ್ಠರ ನಿರ್ಣಯಕ್ಕೆ ಬಿಡಲು ನಿರ್ಧರಿಸಲಾಯಿತು ಎಂದು ಮೂಲಗಳು ತಿಳಿಸಿವೆ.

loader