ಜೆಡಿಎಸ್  ರಾಜ್ಯಾಧ್ಯಕ್ಷ ಎಚ್. ವಿಶ್ವನಾಥ್ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಯಾರ ನೇಮಕವಾಗಲಿದೆ ಎನ್ನುವುದು ಸದ್ಯದ ಚರ್ಚೆಯಾಗಿದೆ. ಹಲವು ಹೆಸರುಗಳು ಕೇಳಿ ಬಂದಿವೆ. 

ಬೆಂಗಳೂರು : ಜೆಡಿಎಸ್‌ ರಾಜ್ಯಾಧ್ಯಕ್ಷ ಹುದ್ದೆಗೆ ಶಾಸಕ ಎಚ್‌.ವಿಶ್ವನಾಥ್‌ ನೀಡಿರುವ ರಾಜೀನಾಮೆಯನ್ನು ಹಿಂಪಡೆಯದಿದ್ದರೆ ಆ ಸ್ಥಾನಕ್ಕೆ ಯಾರು ಎಂಬ ಪ್ರಶ್ನೆ ಪಕ್ಷದಲ್ಲಿ ಮೂಡಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಪಕ್ಷದ ವರಿಷ್ಠರು ಸಹ ರಾಜ್ಯಾಧ್ಯಕ್ಷ ಹುದ್ದೆಗೆ ಯಾರು ಸೂಕ್ತ ಎಂಬ ಚಿಂತನೆಯಲ್ಲಿ ತೊಡಗಿದ್ದಾರೆ. ಮಾಜಿ ಶಾಸಕರಾದ ಮಧು ಬಂಗಾರಪ್ಪ, ವೈ.ಎಸ್‌.ವಿ.ದತ್ತ ಮತ್ತಿತರ ಹೆಸರುಗಳು ಕೇಳಿಬಂದಿವೆ. 

ಸಮ್ಮಿಶ್ರ ಸರ್ಕಾರ ಅಭದ್ರಗೊಂಡಲ್ಲಿ ಮಧ್ಯಂತರ ಚುನಾವಣೆ ಯಾವಾಗ ಬೇಕಾದರೂ ಎದುರಾಗುವ ಸಾಧ್ಯತೆ ಇರುವ ಕಾರಣ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರಿಗೆ ಈ ಜವಾಬ್ದಾರಿ ವಹಿಸುವ ಬಗ್ಗೆ ಪಕ್ಷದಲ್ಲಿ ಆಲೋಚನೆ ನಡೆದಿದೆ ಎಂದು ಹೇಳಲಾಗಿದೆ.