ಹುಬ್ಬಳ್ಳಿ : ರಾಜ್ಯದಲ್ಲಿ ಲೋಕಸಭಾ ಚುನಾವಣೆ ಕಾವು ಆರಿದೆ. ಅಭ್ಯರ್ಥಿಗಳು ಫಲಿತಾಂಶಕ್ಕೆ ಕಾತರರಾಗಿದ್ದಾರೆ. ಇದೇ ವೇಳೆ ರಾಜ್ಯದಲ್ಲಿ ಇದೀಗ ವಿಧಾನ ಸಭಾ ಉಪ ಚುನಾವಣೆ  ಮಾಡುತ್ತಿದೆ. 

ಸಚಿವ  ಶಿವಳ್ಳಿ ನಿಧನದಿಂದ ತೆರವಾದ ಧಾರವಾಡ ಜಿಲ್ಲೆಯ ಕುಂದಗೋಳ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ನಡೆಯುತ್ತಿದ್ದು, ಈ ಕ್ಷೇತ್ರದಿಂದ ಟಿಕೆಟ್ ಆಕಾಂಕ್ಷಿಗಳ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. 

ಈಗಾಗಲೇ ಶಿವಳ್ಳಿ ಪತ್ನಿಗೆ ಟಿಕೆಟ್ ನೀಡಲು ಕಾಂಗ್ರೆಸ್ ಮುಖಂಡರಲ್ಲಿ ಒಮ್ಮತವಿದೆ. ಆದರೆ ಇಲ್ಲಿನ ಸ್ಥಳೀಯ ಕಾಂಗ್ರೆಸ್ ಮುಖಂಡ ಕಣಕ್ಕಿಳಿಯಲು ಇಚ್ಚಿಸಿದ್ದು, ಈ ನಿಟ್ಟಿನಲ್ಲಿ ಪಕ್ಷದ ವರಿಷ್ಠರ ಬಳಿ ಟಿಕೆಟ್ ನೀಡುವಂತೆ ಮನವಿ ಸಲ್ಲಿಸಿದ್ದಾರೆ. 

ಯಲ್ಲಪ್ಪ ಬಿಸಿರೊಟ್ಟಿ ಕುಂದಗೋಳ ತಾಲೂಕಿನ ಹಿರೇಗುಂಜಳದ ಕಾಂಗ್ರೆಸ್ ಮುಖಂಡರಾಗಿದ್ದು, ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಈ ವಿಚಾರ ತಿಳಿಸಿದ್ದಾರೆ. 

ಒಂದು ವೇಳೆ ಟಿಕೆಟ್ ಸಿಗದಿದ್ದಲ್ಲಿ ಪಕ್ಷ ಸೂಚಿಸಿದ ಅಭ್ಯರ್ಥಿಗೆ ಬೆಂಬಲ ನೀಡಿ,  ಸಿದ್ಧಾಂತಗಳಿಗೆ ಬದ್ಧನಾಗಿ ನಡೆದುಕೊಳ್ಳುವುದಾಗಿ ಹೇಳಿದ ಯಲ್ಲಪ್ಪ ಬಿಸಿರೊಟ್ಟಿ ಹೇಳಿದ್ದಾರೆ.