ರಾಹುಲ್ ಗಾಂಧಿ ಗುಜರಾತ್’ಗೆ ಭೇಟಿ ನೀಡಿದ ಸಂದರ್ಭದಲ್ಲಿ ಅವರ ಮೇಲೆ ಹಲ್ಲೆ ವಿಚಾರವಾಗಿ ಕಾಂಗ್ರೆಸ್-ಬಿಜೆಪಿ ನಡುವೆ ಮಾತಿನ ಸಮರ ನಡೆದಿದೆ. ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ ಸದನದಲ್ಲಿಂದು ಈ ವಿಚಾರವನ್ನು ಪ್ರಶ್ನಿಸಿದ್ದಾರೆ. ಭದ್ರತಾ ಪ್ರೋಟೋಕಾಲನ್ನು ಅನುಸರಿಸದೇ ಇದ್ದುದರಿಂದ ಹೀಗಾಗಿದೆ ಎಂದು ಗೃಹ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.
ನವದೆಹಲಿ (ಆ.08): ರಾಹುಲ್ ಗಾಂಧಿ ಗುಜರಾತ್’ಗೆ ಭೇಟಿ ನೀಡಿದ ಸಂದರ್ಭದಲ್ಲಿ ಅವರ ಮೇಲೆ ಹಲ್ಲೆ ವಿಚಾರವಾಗಿ ಕಾಂಗ್ರೆಸ್-ಬಿಜೆಪಿ ನಡುವೆ ಮಾತಿನ ಸಮರ ನಡೆದಿದೆ. ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ ಸದನದಲ್ಲಿಂದು ಈ ವಿಚಾರವನ್ನು ಪ್ರಶ್ನಿಸಿದ್ದಾರೆ. ಭದ್ರತಾ ಪ್ರೋಟೋಕಾಲನ್ನು ಅನುಸರಿಸದೇ ಇದ್ದುದರಿಂದ ಹೀಗಾಗಿದೆ ಎಂದು ಗೃಹ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.
ರಾಹುಲ್ ಗಾಂಧಿ ಭಾರತ ಮತ್ತು ವಿದೇಶಗಳಲ್ಲಿ ಪ್ರಯಾಣಿಸುವಾಗ ಸಾಕಷ್ಟು ಬಾರಿ ಭದ್ರತಾ ಪ್ರೋಟೋಕಾಲನ್ನು ಉಲ್ಲಂಘಿಸಿದ್ದಾರೆ. ಕಳೆದ 2 ವರ್ಷಗಳಲ್ಲಿ 121 ಬಾರಿ ಯೋಜಿತ ಮತ್ತು ಯೋಜಿತೇತರ ಪ್ರವಾಸ ಕೈಗೊಂಡಿದ್ದಾರೆ. ಅದರಲ್ಲಿ 100 ಬಾರಿ ಬುಲೆಟ್ ಪ್ರೂಫ್ ಕಾರನ್ನು ಬಳಸಿಲ್ಲ. ಯಾವುದೇ ಮಾಹಿತಿಯನ್ನು ನೀಡದೇ ಪ್ರವಾಸ ಕೈಗೊಳ್ಳುವುದರಿಂದ ಭದ್ರತೆ ಒದಗಿಸುವ ಸಮಸ್ಯೆ ಎದುರಾಗುತ್ತದೆ ಎಂದು ರಾಜನಾಥ್ ಸಿಂಗ್, ಮಲ್ಲಿಕಾರ್ಜುನ ಖರ್ಗೆ ಪ್ರಶ್ನೆಗೆ ಉತ್ತರಿಸಿದ್ದಾರೆ.
ರಾಹುಲ್ ಗಾಂಧಿ ಎಲ್ಲಿಗೆ ಹೋಗಿದ್ದರು? ಯಾಕೆ ವಿಶೇಷ ರಕ್ಷಣಾ ತಂಡವನ್ನು ಕರೆದುಕೊಂಡು ಹೋಗಿಲ್ಲ? ಈ ಮೂಲಕ ಏನನ್ನು ಮುಚ್ಚಿಡುತ್ತಿದ್ದಾರೆ ಎಂದು ತಿಳಿದುಕೊಳ್ಳಲು ಸದನ ಮತ್ತು ದೇಶ ಬಯಸುತ್ತದೆ ಎಂದು ರಾಜನಾಥ್ ಸಿಂಗ್ ಹೇಳಿದ್ದಾರೆ.
