ರಾಜ್ಯಾದ್ಯಂತ ಕಂಬಳ ಪರ ಹೋರಾಟ ಶುರುವಾಗಿದೆ. ನಿನ್ನೆ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನೂರಾರು ಹೋರಾಟಗಾರರು ಪ್ರತಿಭಟನೆ ಮಾಡಿದ್ದರು. ಇಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಸಮ್ಮುಖದಲ್ಲಿ ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದ ಬಳಿ ಪ್ರತಿಭಟನೆ ನಡೆಯಿತು.
ಬೆಂಗಳೂರು (ಜ.23): ಕಂಬಳ ಕಾಪಾಡಿ ಸುವರ್ಣ ನ್ಯೂಸ್ ಅಭಿಯಾನಕ್ಕೆ ಭಾರೀ ಬೆಂಬಲ ವ್ಯಕ್ತವಾಗಿದೆ.
ರಾಜ್ಯಾದ್ಯಂತ ಕಂಬಳ ಪರ ಹೋರಾಟ ಶುರುವಾಗಿದೆ. ನಿನ್ನೆ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನೂರಾರು ಹೋರಾಟಗಾರರು ಪ್ರತಿಭಟನೆ ಮಾಡಿದ್ದರು. ಇಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಸಮ್ಮುಖದಲ್ಲಿ ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದ ಬಳಿ ಪ್ರತಿಭಟನೆ ನಡೆಯಿತು.
ತಮಿಳುನಾಡಲ್ಲಿ ಜಲ್ಲಿಕಟ್ಟು ಆಚರಣೆಗೆ ಅನುಮತಿ ಸಿಕ್ಕಂತೆ ರಾಜ್ಯದಲ್ಲೂ ಕಂಬಳ ಕ್ರೀಡೆಗೆ ಗ್ರೀನ್ ಸಿಗ್ನಲ್ ಕೊಡಬೇಕು ಎಂದು ವಾಟಾಳ್ ಒತ್ತಾಯಿಸಿದ್ದಾರೆ.
ಕನ್ನಡ ಪರ ಒಕ್ಕೂಟ ಹಾಗೂ ಅಂಬೇಡ್ಕರ್ ಸೇನೆಯ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸರ್ಕಾರ ಕರ್ನಾಟಕವನ್ನು ನಿರ್ಲಕ್ಷ ಮಾಡುತ್ತಿದೆ ಎಂದು ಪ್ರತಿಕೃತಿ ದಹಿಸಿದ್ದಾರೆ.
ಇದೇ 25 ರ ಒಳಗೆ ಕಂಬಳಕ್ಕೆ ಅನುಮತಿ ನೀಡದಿದ್ದರೆ ರಾಜಭವನಕ್ಕೆ ಮುತ್ತಿಗೆ ಹಾಕಲಾಗುವುದು. ಜೊತೆಗೆ ಕರ್ನಾಟಕ ಬಂದ್ಗೆ ಕರೆ ನೀಡುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಫಿಲ್ಮ್ ಚೇಂಬರ್ ಅಧ್ಯಕ್ಷ ಸಾ.ರಾ ಗೋವಿಂದು ಕೂಡ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.