ಪತಿಗೆ ಬೇರೊಬ್ಬ ಮಹಿಳೆಯ ಜೊತೆ ಅಕ್ರಮ ಸಂಬಂಧವಿದೆ ಎನ್ನುವ ಅನುಮಾನದಿಂದ ಬೇಸತ್ತು ಗೃಹಿಣಿಯೊಬ್ಬರು  6 ವರ್ಷದ ಮಗುವನ್ನು ಕೊಂದು ಬಳಿಕ ತಾನು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಂಗಳೂರಿನ ಕೆಂಪೇಗೌಡನಗರದಲ್ಲಿ ನಡೆದಿದೆ.

ಬೆಂಗಳೂರು(ಜು.08): ಪತಿಗೆ ಬೇರೊಬ್ಬ ಮಹಿಳೆಯ ಜೊತೆ ಅಕ್ರಮ ಸಂಬಂಧವಿದೆ ಎನ್ನುವ ಅನುಮಾನದಿಂದ ಬೇಸತ್ತು ಗೃಹಿಣಿಯೊಬ್ಬರು 6 ವರ್ಷದ ಮಗುವನ್ನು ಕೊಂದು ಬಳಿಕ ತಾನು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಂಗಳೂರಿನ ಕೆಂಪೇಗೌಡನಗರದಲ್ಲಿ ನಡೆದಿದೆ.

ಸಮೀರಪುರ ನಿವಾಸಿ ಮಂಗಳ ಮತ್ತು 6 ವರ್ಷದ ಮಗು ಸನ್ನಿಧಿ ಮೃತ ದುರ್ದೈವಿಗಳು. ಪತಿ ಶಂಕರ್'​ಗೆ ಬೇರೊಬ್ಬ ಮಹಿಳೆ ಜೊತೆ ಅಕ್ರಮ ಸಂಬಂಧವಿತ್ತು ಎಂಬ ಕಾರಣಕ್ಕೆ ಇಬ್ಬರ ನಡುವೆ ಪತಿ ಪತ್ನಿ ನಡುವೆ ಆಗ್ಗಿಂದ್ದಾಗ್ಗೆ ಜಗಳ ನಡೆಯುತ್ತಿತ್ತು. ಇದೇ ವಿಚಾರವಾಗಿ ಮಂಗಳ ಬಹಳ ಮಾನಸಿಕವಾಗಿ ಖಿನ್ನತೆಗೊಳಗಾಗಿದ್ದರು ಎನ್ನಲಾಗಿದೆ.

ನಿನ್ನೆ ಮಧ್ಯಾಹ್ನ 6:30ರ ವೇಳೆ ತಮ್ಮ ಮನೆಯ ಕೊಠಡಿಯೊಂದರಲ್ಲಿ ತನ್ನ ಮಗಳನ್ನು ಮೊದಲು ನೇಣಿಗೇರಿಸಿ ಬಳಿಕ ಗೃಹಿಣಿ ಮಂಗಳ ಪಕ್ಕದಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತಿ ಶಂಕರ್ ಕೆಲಸ ಮುಗಿಸಿ ಮನೆಗೆ ಬಂದಾಗ ವಿಷ್ಯ ಬೆಳಕಿಗೆ ಬಂದಿದ್ದು ಕೂಡಲೇ ಅವರು ಕೆ.ಜಿನಗರ ಪೊಲೀಸ್ರಿಗೆ ಮಾಹಿತಿ ನೀಡಿದ್ದಾರೆ.

ಸದ್ಯ, ಘಟನೆ ಸಂಬಂಧ ಕೆ.ಜಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.