ಸುದ್ದಿಗೋಷ್ಠಿಯನ್ನುದ್ದೇಶಿ ಮಾತನಾಡಿದ ಮಂಡಳಿಯ ಪ್ರಧಾನ ಕಾರ್ಯದರ್ಶಿ ಮೌಲಾನ ವಲೀ ರಹ್ಮಾನಿ, ಬಾಬರಿ ಮಸೀದಿ- ರಾಮಮಂದಿರ ವಿಚಾರದಲ್ಲಿ ಸುಪ್ರೀಂ ಕೋರ್ಟ್ ನೀಡುವ ತೀರ್ಪನ್ನು ಮುಸ್ಲಿಮ್ ಸಮುದಾಯವು ಸ್ವಾಗತಿಸುವುದಾಗಿ ಹೇಳಿದ್ದಾರೆ.

ನವದೆಹಲಿ (ಏ.16): ಬಾಬರಿ ಮಸೀದಿ- ರಾಮಮಂದಿರ ವಿವಾದವನ್ನು ನ್ಯಾಯಾಲಯದ ಹೊರಗೆ ಪರಿಹಾರ ಕಂಡುಕೊಳ್ಳಲು ಸಾಧ್ಯವಿಲ್ಲ, ಸುಪ್ರೀಂ ಕೋರ್ಟ್ ತೀರ್ಪನ್ನು ಮುಸ್ಲಿಮ್ ಸಮುದಾಯವು ಸ್ವಾಗತಿಸುವುದಾಗಿ ಅಖಿಲ ಭಾರತೀಯ ಮುಸ್ಲಿಮ್ ವೈಯುಕ್ತಿಕ ಕಾನೂನು ಮಂಡಳಿ (ಏಐಎಂಪಿಎಲ್’ಬಿ) ಪುನಾರವರ್ತಿಸಿದೆ.

ಸುದ್ದಿಗೋಷ್ಠಿಯನ್ನುದ್ದೇಶಿ ಮಾತನಾಡಿದ ಮಂಡಳಿಯ ಪ್ರಧಾನ ಕಾರ್ಯದರ್ಶಿ ಮೌಲಾನ ವಲೀ ರಹ್ಮಾನಿ, ಬಾಬರಿ ಮಸೀದಿ- ರಾಮಮಂದಿರ ವಿಚಾರದಲ್ಲಿ ಸುಪ್ರೀಂ ಕೋರ್ಟ್ ನೀಡುವ ತೀರ್ಪನ್ನು ಮುಸ್ಲಿಮ್ ಸಮುದಾಯವು ಸ್ವಾಗತಿಸುವುದಾಗಿ ಹೇಳಿದ್ದಾರೆ.

ಈ ಹಿಂದೆ ಬಾಬರಿ ಮಸೀದಿ- ರಾಮಮಂದಿರ ವಿವಾದವನ್ನು ಕಕ್ಷಿದಾರರು ಪರಸ್ಪರ ಮಾತುಕತೆಯ ಮೂಲಕ ಬಗೆಹರಿಸಿಕೊಳ್ಳುವಂತೆ ಸುಪ್ರೀಂ ಕೋರ್ಟ್ ಸಲಹೆ ನೀಡಿತ್ತು.

ತ್ರಿವಳಿ ತಲಾಖ್ ಪದ್ದತಿಯ ಬಗ್ಗೆ ಜನಜಾಗೃತಿಯನ್ನುಂಟು ಮಾಡಲಾಗುತ್ತಿದೆ, ಯಾವುದೇ ಕಾರಣವಿಲ್ಲದೇ ತ್ರಿವಳಿ ತಲಾಖ್ ದುರ್ಬಳಕೆ ಮಾಡುವವರನ್ನು ಸಾಮಾಜಿಕವಾಗಿ ಬಹಿಷ್ಕರಿಸಲಾಗುವುದೆಂದು ಅವರು ಹೇಳಿದ್ದಾರೆ.