ಸಿಎಂ ಸಿದ್ದರಾಮಯ್ಯ ಇಂದು ಉಡುಪಿ ಜಿಲ್ಲೆಯ ಪ್ರವಾಸ ಕೈಗೊಳ್ಳಲಿದ್ದಾರೆ. ದುಬೈ ಉದ್ಯಮಿ ಬಿ.ಆರ್.ಶೆಟ್ಟಿ ಸಹಭಾಗಿತ್ವದಲ್ಲಿ ಹೆರಿಗೆ ಆಸ್ಪತ್ರೆಯೊಂದು ನಿರ್ಮಾಣವಾಗಿದ್ದು, ಆಸ್ಪತ್ರೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಉಡುಪಿ: ಸಿಎಂ ಸಿದ್ದರಾಮಯ್ಯ ಇಂದು ಉಡುಪಿ ಜಿಲ್ಲೆಯ ಪ್ರವಾಸ ಕೈಗೊಳ್ಳಲಿದ್ದಾರೆ. ದುಬೈ ಉದ್ಯಮಿ ಬಿ.ಆರ್.ಶೆಟ್ಟಿ ಸಹಭಾಗಿತ್ವದಲ್ಲಿ ಹೆರಿಗೆ ಆಸ್ಪತ್ರೆಯೊಂದು ನಿರ್ಮಾಣವಾಗಿದ್ದು, ಆಸ್ಪತ್ರೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಈ ಕಾರ್ಯಕ್ರಮ ಕೃಷ್ಣಮಠದಿಂದ ಅನತಿ ದೂರದಲ್ಲೇ ನಡೆಯಲಿದೆ. ಹಾಗಾಗಿ ಈ ಬಾರಿಯಾದ್ರೂ ಸಿಎಂ ಕೃಷ್ಣಮಠಕ್ಕೆ ಭೇಟಿ ನೀಡ್ತಾರಾ? ಎಂಬುವುದು ಈಗ ಬಿಸಿಬಿಸಿ ಚರ್ಚೆಗೆ ಕಾರಣವಾಗಿದೆ.
ಸಿಎಂ ಕಳೆದ 4 ಬಾರಿ ಉಡುಪಿಗೆ ಬಂದಾಗಲೂ ಕೃಷ್ಣಮಠಕ್ಕೆ ಭೇಟಿ ನೀಡಿರಲಿಲ್ಲ. ಹಾಗಾಗಿ ಈ ಬಾರಿ ಮಠದಿಂದ ಯಾವುದೇ ಅಧಿಕೃತ ಆಹ್ವಾನ ನೀಡಿಲ್ಲ. ಕೃಷ್ಣಮಠದ ಜೊತೆ ದಶಕಗಳಿಂದ ಅಂತರ ಕಾಯ್ದುಕೊಂಡು ಬಂದಿರುವ ಸಿಎಂ. ತಮ್ಮ ನಿಲುವಿಗೆ ಬದ್ದರಾಗಿ ಮಠಕ್ಕೆ ಭೇಟಿ ನೀಡದಿರುವ ಸಾಧ್ಯತೆಯೇ ಹೆಚ್ಚಾಗಿದೆ.
