ನವದೆಹಲಿ(ಅ.31): ಪಾಕಿಸ್ತಾನದ ಪರವಾಗಿ ಕೇಳಿಬಂದಿರುವ ಬೇಹುಗಾರಿಕೆ ಪ್ರಕರಣದಲ್ಲಿ ನನ್ನ ಪಾತ್ರ ಸಾಬೀತಾಗಿದ್ದೇ ಆದರೆ, ಕುಟುಂಬ ಸಮೇತರಾಗಿ ಆತ್ಮಹತ್ಯೆ ಮಾಡುಕೊಳ್ಳುತ್ತೇವೆಂದು ಎಸ್ಪಿ ಸಂಸದ ಮುನ್ನಾವರ್ ಸಲೀಮ್ ಸವಾಲ್ ಹಾಕಿದ್ದಾರೆ.

ರಕ್ಷಣಾ ಇಲಾಖೆಯ ದಾಖಲೆಗಳು ಹಾಗೂ ಗೌಪ್ಯ ಮಾಹಿತಿಗಳನ್ನು ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲಾಗುತ್ತಿದೆ ಎಂಬ ಪ್ರಕರಣದಲ್ಲಿ ಪಾಕಿಸ್ತಾನ ರಾಯಭಾರಿ ಕಚೇರಿಯ ಅಧಿಕಾರಿಗಳನ್ನು ಬಂಧನಕ್ಕೊಳಪಡಿಸಲಾಗಿತ್ತು. ಇದರ ಬೆನ್ನಲ್ಲೇ ಸಮಾಜವಾದಿ ಪಕ್ಷದ ಸಂಸದ ಮುನ್ನವಾರ್ ಸಲೀಮ್ ಅವರ ಆಪ್ತ ಕಾರ್ಯದರ್ಶಿಯಾಗಿ ಫರ್ಹತ್ ಖಾನ್ ಎಂಬುವವರನ್ನು ಪೊಲೀಸರು ಬಂಧಿಸಿದ್ದರು.