ಹೈಕಮಾಂಡ್ ಹೇಳಿದ ಕಡೆ ಸ್ಪರ್ಧಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸುವ ಮೂಲಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನೀಡಿರುವ ಪಂಥಾಹ್ವಾನಕ್ಕೆ ತಣ್ಣನೆಯ ಪ್ರತಿಕ್ರಿಯೆ ನೀಡಿದ್ದಾರೆ.

ಚಿಕ್ಕಬಳ್ಳಾಪುರ: ಹೈಕಮಾಂಡ್ ಹೇಳಿದ ಕಡೆ ಸ್ಪರ್ಧಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸುವ ಮೂಲಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನೀಡಿರುವ ಪಂಥಾಹ್ವಾನಕ್ಕೆ ತಣ್ಣನೆಯ ಪ್ರತಿಕ್ರಿಯೆ ನೀಡಿದ್ದಾರೆ.

ಅಲ್ಲದೇ ಬಿಎಸ್‌ವೈ ಅವರಿಗೆ ಸತ್ಯ ಹೇಳಿಯೇ ಗೊತ್ತಿಲ್ಲ ಎಂದು ಟೀಕಿಸಿದ್ದಾರೆ.ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಮುಖ್ಯಮಂತ್ರಿಗಳು,ತಾವು 40 ವರ್ಷದಿಂದ ರಾಜಕಾರಣದಲ್ಲಿದ್ದು, ಈಗಾಗಲೇ ಉತ್ತರ ಕರ್ನಾಟಕದ ಕೊಪ್ಪಳದಲ್ಲಿ ಸ್ಪರ್ಧಿಸಿದ್ದೇನೆ.

ಆದರೂ ಹೈಕಮಾಂಡ್ ಎಲ್ಲಿ ಹೇಳುವುದೋ ಅಲ್ಲಿ ಸ್ಪರ್ಧಿಸುವುದಾಗಿ ತಿಳಿಸಿದರು. ಬಿಎಸ್‌ವೈ ಅವರ ವಿರುದ್ಧ ಹರಿ ಹಾಯ್ದ ಸಿಎಂ, ಅವರಿಗೆ ಸತ್ಯ ಹೇಳಿ ಗೊತ್ತೇ ಇಲ್ಲ. ಡೋಂಗಿತನ ಪ್ರದರ್ಶಿ ಸುತ್ತಿದ್ದಾರೆ. ರೈತರ ಸಾಲಮನ್ನಾ ವಿಚಾರದಲ್ಲಿ ಕೇಂದ್ರದ ಮೇಲೆ ಒತ್ತಡ ಹೇರುವಲ್ಲಿ ವಿಫಲವಾಗಿರುವ ಯಡಿಯೂರಪ್ಪ ಅವರು, ಭಿಕ್ಷುಕರಿಗೆ ನೀಡಿದಂತೆ ರೈತರಿಗೆ ಅಲ್ಪ ಸಾಲ ಮನ್ನಾ ಮಾಡಿದ್ದಾರೆ ಎಂದು ಲೇವಡಿ ಮಾಡಿರುವುದು ವಿಪರ್ಯಾಸ ಎಂದರು.