ಹ್ಯಾಟ್ರಿಕ್ ಹೀರೋ ಶಿವಣ್ಣ ಹೋಗ್ತಾರಾ ಚುನಾವಣಾ ಪ್ರಚಾರಕ್ಕೆ?

First Published 13, Apr 2018, 12:07 AM IST
Will Dr Shivaraj Kumar campaigns for this Karnataka Assembly election
Highlights

ಈ ಬಾರಿ ಯಾವುದೇ ಪಕ್ಷದ ಪರವಾಗಿ ನಾನು ಚುನಾವಣೆ ಪ್ರಚಾರಕ್ಕೆ ಹೋಗುವುದಿಲ್ಲ ಎಂದು ಹ್ಯಾಟ್ರಿಕ್‌ ಹೀರೋ ಶಿವರಾಜ್‌ ಕುಮಾರ್‌ ತಿಳಿಸಿದ್ದಾರೆ.

ಬೆಂಗಳೂರು: ಈ ಬಾರಿ ಯಾವುದೇ ಪಕ್ಷದ ಪರವಾಗಿ ನಾನು ಚುನಾವಣೆ ಪ್ರಚಾರಕ್ಕೆ ಹೋಗುವುದಿಲ್ಲ ಎಂದು ಹ್ಯಾಟ್ರಿಕ್‌ ಹೀರೋ ಶಿವರಾಜ್‌ ಕುಮಾರ್‌ ತಿಳಿಸಿದ್ದಾರೆ. ನನಗೆ ನನ್ನದೇ ಕೆಲಸಗಳಿವೆ. ಚಿತ್ರೀಕರಣದಲ್ಲಿ ಬ್ಯುಸಿ ಇದ್ದೇನೆ. ಚುನಾವಣೆ ಪ್ರಚಾರಕ್ಕೆ ಹೋಗುವುದಿಲ್ಲ ಎಂದು ಗುರುವಾರ ತಂದೆಯ ಸಮಾಧಿಗೆ ಪೂಜೆ ಸಲ್ಲಿಸಿದ ನಂತರ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.

ಕಳೆದ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಅವರ ಪತ್ನಿ ಗೀತಾ ಸ್ಪರ್ಧಿಸಿದ್ದ ಹಿನ್ನೆಲೆಯಲ್ಲಿ ಅವರು ಹಲವು ದಿನಗಳ ಕಾಲ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಿರುಸಿನ ಪ್ರಚಾರ ನಡೆಸಿದ್ದರು. ಈಗಲೂ ಗೀತಾ ಶಿವರಾಜ್‌ ಕುಮಾರ್‌ ಅವರು ಸಹೋದರ ಮಧು ಬಂಗಾರಪ್ಪ ಪರವಾಗಿ ಚುನಾವಣೆ ಪ್ರಚಾರ ನಡೆಸಿದ್ದಾರೆ.

loader