ರಾಜ್ಯದಲ್ಲಿ ಗೋಮಾಂಸದ ಕೊರತೆಯಾಗದಂತೆ ನೋಡಿಕೊಳ್ಳಲಾಗುವುದು ಎಂದು ಬಿಜೆಪಿ ನೇತೃತ್ವದ ಗೋವಾ ಸರ್ಕಾರ ಹೇಳಿದೆ. ಇಂದು ಸದನದಲ್ಲಿ ಮಾತನಾಡಿದ ಮುಖ್ಯಮಂತ್ರಿ ಮನೋಹರ್ ಪರ್ರಿಕರ್, ಗೋವಾದಲ್ಲಿ ಗೋಮಾಂಸ ಸಾಕಾಷ್ಟು ಪ್ರಮಾಣದಲ್ಲಿ ಲಭ್ಯವಾಗುವಂತೆ ಕ್ರಮಕೈಗೊಳ್ಳುವುದಾಗಿ ಖಚಿತಪಡಿಸಿದ್ದಾರೆ.

ಪಣಜಿ: ರಾಜ್ಯದಲ್ಲಿ ಗೋಮಾಂಸದ ಕೊರತೆಯಾಗದಂತೆ ನೋಡಿಕೊಳ್ಳಲಾಗುವುದು ಎಂದು ಬಿಜೆಪಿ ನೇತೃತ್ವದ ಗೋವಾ ಸರ್ಕಾರ ಹೇಳಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಇಂದು ಸದನದಲ್ಲಿ ಮಾತನಾಡಿದ ಮುಖ್ಯಮಂತ್ರಿ ಮನೋಹರ್ ಪರ್ರಿಕರ್, ಗೋವಾದಲ್ಲಿ ಗೋಮಾಂಸ ಸಾಕಾಷ್ಟು ಪ್ರಮಾಣದಲ್ಲಿ ಲಭ್ಯವಾಗುವಂತೆ ಕ್ರಮಕೈಗೊಳ್ಳುವುದಾಗಿ ಖಚಿತಪಡಿಸಿದ್ದಾರೆ. ಒಂದು ವೇಳೆ ಕೊರತೆಯಾದಲ್ಲಿ ಅಕ್ಕಪಕ್ಕದ ರಾಜ್ಯಗಳಿಂದ ಗೋಮಾಂಸವನ್ನು ಆಮದು ಮಾಡಿಕೊಳ್ಳುವುದಾಗಿ ಅವರು ಹೇಳಿದ್ದಾರೆ.

ಬೆಳಗಾವಿ ಹಾಗೂ ಇನ್ನಿತರ ಸ್ಥಳಗಳಿಂದ ಗೋಮಾಂಸವನ್ನು ತರಿಸುವ ಆಯ್ಕೆ ನಮ್ಮ ಮುಂದಿದೆ ಎಂದು ಅವರು ಹೇಳಿದ್ದಾರೆ.

ಹೊರರಾಜ್ಯಗಳಿಂದ ಬರುವ ಗೋಮಾಂಸದ ಗುಣಮಟ್ಟವನ್ನು ತಜ್ಞ ವೈದ್ಯರ ತಂಡವು ಪರಿಶೀಲಿಸುವುದು ಎಂದು ಅವರುಸದನಕ್ಕೆ ತಿಳಿಸಿದ್ದಾರೆ.

ಪ್ರತಿಯೊಬ್ಬರಿಗೂ ಗೋಮಾಂಸ ಸೇವಿಸುವ ಹಕ್ಕಿದೆ ಎಂದು ಕಳೆದ ವಾರ ಕೇಂದ್ರ ಸಚಿವ ರಾಮದಾಸ್ ಅಥಾವಲೆ ಹೇಳಿದ್ದರು.