Asianet Suvarna News Asianet Suvarna News

ರಾಜ್ಯದಲ್ಲಿ ಮತ್ತೆ ಇಳಿಯುತ್ತಾ ಪೆಟ್ರೋಲ್‌ ಬೆಲೆ..? ಸಿಎಂ ಹೇಳೋದೇನು?

ಕೇಂದ್ರ ಸರ್ಕಾರ ಪೆಟ್ರೋಲ್ ಬೆಲೆ ಇಳಿಕೆ ಮಾಡಿದ್ದು,  ರಾಜ್ಯದಲ್ಲಿ ಈಗಾಗಲೇ ಪೆಟ್ರೋಲ್‌, ಡೀಸೆಲ್‌ ಬೆಲೆ ಇಳಿಕೆ ಮಾಡಲಾಗಿದೆ. ಆದರೆ ಇದೀಗ ಮತ್ತೊಮ್ಮೆ ಇಳಿಕೆ ಮಾಡುವ ಪ್ರಶ್ನೆಯೇ ಇಲ್ಲ ಎಂದು ಸಿಎಂ ಹೇಳಿದ್ದಾರೆ. 

Will Government reduce excise cess on Petrol Diesel in Karnataka
Author
Bengaluru, First Published Oct 5, 2018, 11:15 AM IST
  • Facebook
  • Twitter
  • Whatsapp

ಬೆಂಗಳೂರು : ರಾಜ್ಯದಲ್ಲಿ ಈಗಾಗಲೇ ಪೆಟ್ರೋಲ್‌, ಡೀಸೆಲ್‌ ಬೆಲೆ ಇಳಿಕೆ ಮಾಡಿರುವುದರಿಂದ ಮತ್ತೆ ಕಡಿಮೆ ಮಾಡುವ ಪ್ರಮೇಯ ಇಲ್ಲ ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ಗುರುವಾರ ಸಂಜೆ ವಿಧಾನಸೌಧದಲ್ಲಿ ಸುದ್ದಿಗಾರರ ಮಾತನಾಡಿದ ಅವರು, ಕೇಂದ್ರ ಸರ್ಕಾರವು ತೈಲ ಬೆಲೆ ಇಳಿಕೆ ಮಾಡುವ ಮೂಲಕ ಈಗಲಾದರೂ ಜನರ ಮೇಲಿನ ಹೊರೆಯನ್ನು ಕಡಿಮೆ ಮಾಡಿದೆ. 

ಕೇಂದ್ರ ಸರ್ಕಾರದ ಕ್ರಮ ಅಭಿನಂದನಾರ್ಹ. ಆದರೆ, ರಾಜ್ಯದಲ್ಲಿ ಈಗಾಗಲೇ ಪೆಟ್ರೋಲ್‌, ಡೀಸೆಲ್‌ ಬೆಲೆಯನ್ನು ಎರಡು ರು. ಇಳಿಕೆ ಮಾಡಲಾಗಿದೆ. ಹೀಗಾಗಿ ಮತ್ತೊಮ್ಮೆ ಇಳಿಕೆ ಮಾಡುವ ಪ್ರಮೇಯ ಬರುವುದಿಲ್ಲ ಎಂದು ಹೇಳಿದರು.

Follow Us:
Download App:
  • android
  • ios