ಕರ್ನಾಟಕದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರಕಾರ ಅಸ್ತಿತ್ವಕ್ಕೆ ಬರುತ್ತಿದ್ದು, ಇದೇ ಮೈತ್ರಿ ಮುಂದಿನ ಲೋಕಸಭೆ ಚುನಾವಣೆಯವರೆಗೂ ವಿಸ್ತರಣೆಯಾಗುವ ಬಗ್ಗೆ ಕಾಂಗ್ರೆಸ್ ಸುಳಿವು ನೀಡಿದೆ. ಈಗಾಗಲೇ ತೃತೀಯ ರಂಗ ರಚನೆಗೆ ಬಿಜೆಪಿ ವಿರೋಧಿ ಬಣಗಳು ಮುಂದಾಗಿದ್ದು, ಬಿಜೆಪಿ ಅಧಿಕಾರಕ್ಕೆ ಬಾರದಂತೆ ಸಕಲ ಪಕ್ಷಗಳು ಕೈ ಜೋಡಿಸಲು ಚಿಂತಿಸುತ್ತಿವೆ.

ಬೆಂಗಳೂರು: ಮುಂಬರುವ ಲೋಕಸಭೆ ಚುನಾವಣೆಗೆ ರಾಜ್ಯದಲ್ಲಿ ಕಾಂಗ್ರೆಸ್‌-ಜೆಡಿಎಸ್‌ ಹೊಂದಾಣಿಕೆ ಮಾಡಿಕೊಂಡು ಚುನಾವಣೆ ಎದುರಿಸುವ ಬಗ್ಗೆ ಚರ್ಚೆ ನಡೆಸುತ್ತೇವೆ ಎಂದು ಕಾಂಗ್ರೆಸ್‌ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎರಡು ಜಾತ್ಯತೀತ ಪಕ್ಷಗಳು ಒಟ್ಟಾಗಿ ಚುನಾವಣೆಗೆ ಹೋಗುವುದು ಒಳಿತು ಎಂಬ ಅಭಿಪ್ರಾಯ ನನ್ನದು. ಹೀಗಾಗಿ, ಮುಂಬರುವ ಲೋಕಸಭಾ ಚುನಾವಣೆಗೆ ರಾಜ್ಯದಲ್ಲಿ ಕಾಂಗ್ರೆಸ್‌-ಜೆಡಿಎಸ್‌ ಹೊಂದಾಣಿಕೆ ಮಾಡಿಕೊಂಡು ಚುನಾವಣೆ ಎದುರಿಸುವ ಬಗ್ಗೆ ಚರ್ಚೆ ನಡೆಸುತ್ತೇವೆ ಎಂದರು.

ಯಾರಿಗೆ ಯಾವ ಖಾತೆ

ಬಿಜೆಪಿಯ ಸಂವಿಧಾನ ವಿರೋಧಿ ನಡೆಗಳಿಂದ ದೇಶದಲ್ಲಿ ಹಲವಾರು ಸಮಸ್ಯೆಗಳು ಸೃಷ್ಟಿಯಾಗಿವೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಸುಳ್ಳಿನ ಗೋಪುರ ಕಟ್ಟುವುದು ಬಿಟ್ಟು ಬೇರೇನೂ ಮಾಡುತ್ತಿಲ್ಲ. ರಾಜ್ಯದಲ್ಲಿ ಜೆಡಿಎಸ್‌-ಕಾಂಗ್ರೆಸ್‌ ಸರ್ಕಾರ ರಚನೆಯಾಗುವುದು ಪ್ರಜಾಪ್ರಭುತ್ವ ಹಾಗೂ ದೇಶಕ್ಕೆ ಒಳ್ಳೆಯದು ಎಂಬ ಕಾರಣಕ್ಕಾಗಿ ಮೈತ್ರಿ ಮಾಡಿಕೊಂಡಿದ್ದೇವೆ. ದೇಶದ ಒಳತಿಗಾಗಿ ಲೋಕಸಭೆ ಚುನಾವಣೆ ವೇಳೆಯಲ್ಲೂ ಮೈತ್ರಿ ಮುಂದುವರೆಸುವ ಬಗ್ಗೆ ಮಾತುಕತೆ ನಡೆಸುತ್ತೇವೆ ಎಂದು ಅವರು ಹೇಳಿದರು.

ರಾಜ್ಯದ ಜನತೆ ಆಡಳಿತ ವಿರೋಧಿ ತೀರ್ಪು ನೀಡಿಲ್ಲ. ಬಿಜೆಪಿಗೆ ಹೆಚ್ಚು ಸ್ಥಾನಗಳು ಬಂದಿದ್ದರೂ ರಾಜ್ಯದ ಜನ ಕಾಂಗ್ರೆಸ್‌ಗೆ ಹೆಚ್ಚು ಮತ ನೀಡಿದ್ದಾರೆ. ಶೇಕಡಾವಾರು ಮತ ಪ್ರಮಾಣದಲ್ಲಿ ಕಾಂಗ್ರೆಸ್‌ ಮುಂದಿದೆ. ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಇನ್ನೂ ಹೆಚ್ಚಿನ ಸ್ಥಾನ ಪಡೆದು ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ದೇಶದ ಕಡಿಮೆ ಅವಧಿಯ ಮುಖ್ಯಮಂತ್ರಿ ಬಿಎಸ್‌ವೈ