ಅನ್ನಭಾಗ್ಯ, ಇಂದಿರಾ ಕ್ಯಾಂಟೀನ್ ಯೋಜನೆಗಳನ್ನು ಕೈಬಿಡುವ ಬಗ್ಗೆ ಬಿಜೆಪಿಯಲ್ಲಿ ಚರ್ಚೆ; ವಿರೋಧ ಪಕ್ಷಗಳಿಂದ ವಿರೋಧ; ಸಿದ್ದರಾಮಯ್ಯ ಜಾರಿಗೆ ತಂದಿದ್ದ ಅನ್ನಭಾಗ್ಯ, ಇಂದಿರಾ ಕ್ಯಾಂಟೀನ್   

ಬೆಂಗಳೂರು (ಆ.17): ಹಿಂದಿನ ಸರ್ಕಾರಗಳು ಜಾರಿಗೆ ತಂದಿರುವ ಜನಪರ ಯೋಜನೆಗಳನ್ನು ರದ್ದುಪಡಿಸಲ್ಲ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಅಧಿಕಾರಕ್ಕೆ ಬಂದ ಬಳಿಕ ಸಿದ್ದರಾಮಯ್ಯ ಆಡಳಿತಾವಧಿಯಲ್ಲಿ ಮತ್ತು ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಆರಂಭಿಸಲಾದ ಮಹಾತ್ವಾಕಾಂಕ್ಷಿ ಯೊಜನೆಗಳನ್ನು ಕೈಬಿಡಲು ಬಿಜೆಪಿಯು ಮುಂದಾಗಿದೆ ಎಂದು ಹೇಳಲಾಗುತ್ತಿತ್ತು. ಈ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿರುವ ಸಿಎಂ, ಅಂತಹ ಯಾವುದೇ ಪ್ರಸ್ತಾವನಮೆ ಸರ್ಕಾರದ ಮುಂದಿಲ್ಲ ಎಂದು ಹೇಳಿದ್ದಾರೆ.

ಜನಪ್ರಿಯ ಯೋಜನೆಗಳನ್ನು ರದ್ದುಪಡಿಸುವ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ. ಅನ್ನಭಾಗ್ಯ ಯೋಜನೆ ಮುಂದುವರಿಸಲು ಅನುದಾನ ಬಿಡುಗಡೆಯ ಕಡತಕ್ಕೆ ಈಗಾಗಲೇ ಸಹಿ ಮಾಡಿದ್ದೇನೆ, ಎಂದು ಯಡಿಯೂರಪ್ಪ ಪ್ರಕಟಿಸಿದ್ದಾರೆ.

Scroll to load tweet…

ಆ ಹಿನ್ನೆಲೆಯಲ್ಲಿ, ಪ್ರತಿಕ್ರಿಯಿಸಿದ್ದ ಮಾಜಿ ಸಿಎಂ ಸಿದ್ದರಾಮಯ್ಯ, ಬಿಜೆಪಿ ಆ ರೀತಿಯೇನಾದರೂ ಮಾಡಿದರೆ  ತಾನು ಬೀದಿಗಿಳಿದು ಪ್ರತಿಭಟನೆ ಮಾಡುತ್ತೇನೆ ಎಂದು ಎಚ್ಚರಿಸಿದ್ದರು.