ಬಿಜೆಪಿ ಗೆದ್ದು ಅಧಿಕಾರಕ್ಕೆ ಬಂದರೆ, ಉತ್ತರಪ್ರದೇಶದ ಮಾದರಿಯಲ್ಲಿ ಎನ್‌ಕೌಂಟರ್‌ ನಡೆಸಲಾಗುವುದು ರಾಜ್ಯ ಬಿಜೆಪಿ ಉಪಾಧ್ಯಕ್ಷೆ ರಾಜಕುಮಾರಿ ಕೇಸರಿ ಆಫರ್‌ ನೀಡಿದ್ದಾರೆ

ಕೋಲ್ಕತಾ[ಡಿ.16]: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಗೆದ್ದು ಅಧಿಕಾರಕ್ಕೆ ಬಂದರೆ, ಉತ್ತರಪ್ರದೇಶದ ಮಾದರಿಯಲ್ಲಿ ಎನ್‌ಕೌಂಟರ್‌ ನಡೆಸಲಾಗುವುದು ರಾಜ್ಯ ಬಿಜೆಪಿ ಉಪಾಧ್ಯಕ್ಷೆ ರಾಜಕುಮಾರಿ ಕೇಸರಿ ಆಫರ್‌ ನೀಡಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಬುದ್ರ್ವಾನ್‌ ಜಿಲ್ಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಕೇಸರಿ, ರಾಜ್ಯದಲ್ಲಿ ಟಿಎಂಸಿ ಅಧಿಕಾರಕ್ಕೆ ಬಂದ ಬಳಿಕ ಗೂಂಡಾಗಳ ಹಾವಳಿ ಹೆಚ್ಚಾಗಿದೆ. ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ, ಉತ್ತರಪ್ರದೇಶದಲ್ಲಿ ಯೋಗಿ ಆದಿತ್ಯನಾಥ್‌ ಸರ್ಕಾರ, ಎನ್‌ಕೌಂಟರ್‌ ನಡೆಸಿ ಗೂಂಡಾಗಳಿಗೆ ಪಾಠ ಕಲಿಸಿದಂತೆ ಪಾಠ ಕಲಿಸಲಾಗುವುದು. ಈಗಾಗಲೇ ಎನ್‌ಕೌಂಟರ್‌ ಮಾಡಬೇಕಾದ ವ್ಯಕ್ತಿಗಳ ಪಟ್ಟಿತಯಾರಿಸುವಂತೆ ಕೇಂದ್ರ ನಾಯಕರು, ರಾಜ್ಯ ನಾಯಕರುಗಳಿಗೆ ಸೂಚಿಸಿದ್ದಾರೆ ಎಂದು ಹೇಳಿದ್ದಾರೆ.

ಕೇಸರಿ ಅವರ ಹೇಳಿಕೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ದಿಲೀಪ್‌ ಘೋಷ್‌ ಕೂಡಾ ಸಮರ್ಥಿಸಿಕೊಂಡಿದ್ದಾರೆ. ಗೂಂಡಾಗಳನ್ನು ಗಂಗಾಜಲದ ಮೂಲಕ ಶುದ್ದೀಕರಿಸಲು ಸಾಧ್ಯವಿಲ್ಲ. ಗೂಂಡಾಗಳಿಗೆ ಅವರದ್ದೇ ರೀತಿ ಪಾಠ ಕಲಿಸಬೇಕು ಎಂದು ಹೇಳಿದ್ದಾರೆ.