ಬೆಂಗಳೂರು (ಅ.01): ಕಾವೇರಿ ವಿಚಾರದಲ್ಲಿ ಸುಪ್ರೀಂ ನೀಡಿರುವ ತೀರ್ಪು ಕರ್ನಾಟಕಕ್ಕೆ ದುರಾದೃಷ್ಟಕರ ಎಂದು ಬಣ್ಣಿಸಿರುವ ರಾಜ್ಯ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಕಾವೇರಿ ನಿರ್ವಹಣಾ ಮಂಡಳಿ ರಚನೆಯಾಗದಂತೆ ಕೇಂದ್ರದ ಮೇಲೆ ಒತ್ತಡ ಹೇರುವುದಾಗಿ ಸುವರ್ಣ ನ್ಯೂಸ್ ಗೆ ತಿಳಿಸಿದ್ದಾರೆ.

ಯಾವುದೇ ಕಾರಣಕ್ಕೂ ಹನಿ ನೀರನ್ನು ತಮಿಳುನಾಡಿಗೆ ಬಿಡಬಾರದು ಎಂದಿರುವ ಯಡಿಯೂರಪ್ಪ ಸರ್ವಪಕ್ಷ ಸಭೆಯಲ್ಲೂ ಇದೆ ಸಲಹೆಯನ್ನು ರಾಜ್ಯ ಸರ್ಕಾರಕ್ಕೆ ನೀಡುತ್ತೇವೆ ಎಂದಿದ್ದಾರೆ.

ಕಾವೇರಿ ನಿರ್ವಹಣಾ ಮಂಡಳಿ ರಚನೆಯಾಗದಂತೆ ಕೇಂದ್ರದ ಮೇಲೆ ಒತ್ತಡ ಹೇರುವುದಾಗಿ ಹೇಳಿರುವ ಯಡಿಯೂರಪ್ಪ ಪ್ರಧಾನಿ ನರೇಂದ್ರ ಮೋದಿ ಜೊತೆ ಈ ಬಗ್ಗೆ ಮಾತನಾಡ್ತೇವೆ ಎಂದಿದ್ದಾರೆ.