ಇತ್ತೀಚೆಗೆ ರಮೇಶ್ ಜಾರಕಿಹೊಳಿಯ ಗೋಕಾಕ್ ಮತ್ತು ಬೆಂಗಳೂರಿನ ಮನೆಗಳ ಮೇಲೆ ಆದಾಯ ತೆರಿಗೆ ಅಧಿಕಾರಿಗಳ ದಾಳಿ ನಡೆದಿತ್ತು. ಶುಕ್ರವಾರದಿಂದ ಸತತ 4 ದಿನಗಳ ಕಾಲ ಐಟಿ ಅಧಿಕಾರಿಗಳು ಭೂತಗನ್ನಡಿ ಹಿಡಿದು ಮಹತ್ವದ ದಾಖಲೆಗಳನ್ನು ಕಲೆ ಹಾಕಿದ್ದಾರೆ.

ಬೆಂಗಳೂರು (ಜ.24): ಸಿಎಂ ಸಿದ್ದರಾಮಯ್ಯ ಸಂಪುಟದಿಂದ ಮತ್ತೊಂದು ವಿಕೆಟ್ ಪತನವಾಗುವ ಸಾಧ್ಯತೆಯಿದೆ.

ಸಣ್ಣ ಕೈಗಾರಿಕೆ ಸಚಿವ ರಮೇಶ್ ಜಾರಕಿಹೊಳಿ ಶೀಘ್ರ ರಾಜೀನಾಮೆ ಕೊಡುವ ಸಂದರ್ಭ ಎದುರಾಗಲಿದೆ ಎಂಬ ಗುಸುಗುಸು ಕೆಪಿಸಿಸಿ ವಲಯದಲ್ಲಿ ಕೇಳಿ ಬರುತ್ತಿದೆ.

ಇತ್ತೀಚೆಗೆ ರಮೇಶ್ ಜಾರಕಿಹೊಳಿಯ ಗೋಕಾಕ್ ಮತ್ತು ಬೆಂಗಳೂರಿನ ಮನೆಗಳ ಮೇಲೆ ಆದಾಯ ತೆರಿಗೆ ಅಧಿಕಾರಿಗಳ ದಾಳಿ ನಡೆದಿತ್ತು. ಶುಕ್ರವಾರದಿಂದ ಸತತ 4 ದಿನಗಳ ಕಾಲ ಐಟಿ ಅಧಿಕಾರಿಗಳು ಭೂತಗನ್ನಡಿ ಹಿಡಿದು ಮಹತ್ವದ ದಾಖಲೆಗಳನ್ನು ಕಲೆ ಹಾಕಿದ್ದಾರೆ.

ಇದರಲ್ಲಿ ಬೇನಾಮಿ ಅಥವಾ ಅಘೋಷಿತ ಆಸ್ತಿ ಮೌಲ್ಯವೇ 165 ಕೋಟಿ ಎಂದು ಗೊತ್ತಾಗಿದೆ. ಜತೆಗೆ, 12 ಕೆಜಿಗೂ ಹೆಚ್ಚು ಚಿನ್ನ ಪತ್ತೆಯಾಗಿದೆ.

ಹೀಗಾಗಿ, ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್​ ಗೋಕಾಕ್ ಸಾಹುಕಾರ್ ಅವರಿಂದ ವಿವರಣೆ ಕೇಳಿದ್ದಾರೆ. ಈ ಸಂಬಂಧ ಮಾತಾಡಿರುವ ರಮೇಶ್ ಜಾರಕಿಹೊಳಿ