ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಸಂಪುಟ ಪುನಾರಚನೆ ಭಾನುವಾರ ಬೆಳಗ್ಗೆ ನಡೆಯುವುದು ಬಹುತೇಕ ಖಚಿತವಾಗಿದ್ದರೂ ಶೀಘ್ರದಲ್ಲೇ ವಿಧಾನಸಭಾ ಚುನಾವಣೆ ಎದುರಿಸಲಿರುವ ಕರ್ನಾಟಕದಿಂದ ಯಾರಿಗೆ ಅವಕಾಶ ಸಿಗಲಿದೆ ಎಂಬುದು ಮಾತ್ರ ಇನ್ನೂ ನಿಗೂಢವಾಗಿಯೇ ಇದೆ.
ನವದೆಹಲಿ(ಸೆ.02): ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಸಂಪುಟ ಪುನಾರಚನೆ ಭಾನುವಾರ ಬೆಳಗ್ಗೆ ನಡೆಯುವುದು ಬಹುತೇಕ ಖಚಿತವಾಗಿದ್ದರೂ ಶೀಘ್ರದಲ್ಲೇ ವಿಧಾನಸಭಾ ಚುನಾವಣೆ ಎದುರಿಸಲಿರುವ ಕರ್ನಾಟಕದಿಂದ ಯಾರಿಗೆ ಅವಕಾಶ ಸಿಗಲಿದೆ ಎಂಬುದು ಮಾತ್ರ ಇನ್ನೂ ನಿಗೂಢವಾಗಿಯೇ ಇದೆ.
ಹಾಲಿ ಇರುವ ಸಚಿವರ ಪೈಕಿ ಡಿ.ವಿ.ಸದಾ ನಂದಗೌಡರನ್ನು ಸಂಪುಟದಿಂದ ಕೈಬಿಡಬಹುದು ಎಂಬ ವದಂತಿ ಕೇಳಿಬಂದಿತ್ತಾದರೂ ಶುಕ್ರವಾರ ರಾತ್ರಿವರೆಗೂ ರಾಜೀನಾಮೆ ನೀಡುವವರ ಪಟ್ಟಿಯಲ್ಲಿ ಗೌಡರ ಹೆಸರು ಇರಲಿಲ್ಲ. ಹೀಗಾಗಿ, ಸದಾನಂದಗೌಡರು ಸಂಪುಟದಲ್ಲಿ ಮುಂದುವರೆಯುವ ಸಾಧ್ಯತೆಯೇ ಹೆಚ್ಚು. ಖಾತೆ ಬದಲಾವಣೆಯಾಗುವ ನಿರೀಕ್ಷೆಯೂ ಇದೆ ಎಂದು ಮೂಲಗಳು ತಿಳಿಸಿವೆ.
ಇನ್ನುಳಿದಂತೆ ಸುರೇಶ್ ಅಂಗಡಿ, ಪ್ರಹ್ಲಾದ್ ಜೋಶಿ, ಶೋಭಾ ಕರಂದ್ಲಾಜೆ ಅವರ ಹೆಸರುಗಳು ನೂತನ ಸಚಿವರಾಗುವ ಸಾಧ್ಯತೆ ಇರುವವರ ಸಾಲಿನಲ್ಲಿ ಬಲವಾಗಿ ಕೇಳಿ ಬರುತ್ತಿವೆ. ಒಕ್ಕಲಿಗ ಸಮುದಾಯದ ಸದಾನಂದಗೌಡರು ಸಂಪುಟದಲ್ಲಿ ಮುಂದುವರೆದಲ್ಲಿ ಅದೇ ಸಮುದಾಯಕ್ಕೆ ಸೇರಿದ ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಅವರಿಗೆ ಅವಕಾಶ ಸಿಗುವ ಸಂಭವ ಕ್ಷೀಣಿಸಲಿದೆ. ಆದರೆ, ಜಾತಿ ಸಮೀಕರಣ ಬದಿಗಿಟ್ಟು ಕೆಲಸ ಮಾಡಬಲ್ಲ ಸಾಮರ್ಥ್ಯ ಹೊಂದಿದವರು ಮತ್ತು ಮಹಿಳೆಯೊಬ್ಬರಿಗೆ ಸಚಿವ ಸ್ಥಾನ ಕೊಟ್ಟಂತಾಗುತ್ತದೆ ಎಂಬ ನಿರ್ಧಾರಕ್ಕೆ ಬಂದಲ್ಲಿ ಶೋಭಾ ಕರಂದ್ಲಾಜೆ ಅವರಿಗೆ ಅವಕಾಶ ಸಿಗಬಹುದು ಎನ್ನಲಾಗುತ್ತಿದೆ.
ಆದರೆ, ಕರಾವಳಿ ಭಾಗಕ್ಕೆ ಸಚಿವ ಸ್ಥಾನ ನೀಡುವ ಮೂಲಕ ಹಿಂದುತ್ವದ ಪ್ರಭಾವ ಉಳಿಸಿಕೊಳ್ಳಬೇಕು ಎಂಬ ನಿಲವಿಗೆ ಬಂದಿದ್ದೇ ಆದಲ್ಲಿ ಶೋಭಾ ಕರಂದ್ಲಾಜೆ ಬದಲು ನಳಿನ್‌ಕುಮಾರ್ ಕಟೀಲು ಅವರಿಗೆ ಸಂಪುಟದಲ್ಲಿ ಸ್ಥಾನ ಲಭಿಸಬಹುದು ಎಂಬ ಮಾತೂ ಕೇಳಿಬರುತ್ತಿದೆ. ಕಟೀಲು ಅವರಿಗೆ ಸಂಘ ಪರಿವಾರದ ಪ್ರಬಲ ಬೆಂಬಲವಿದೆ. ಲಿಂಗಾಯತರಿಗೆ ಪ್ರತ್ಯೇಕ ‘ರ್ಮದ ಸ್ಥಾನಮಾನ ಕುರಿತು ರಾಜ್ಯದಲ್ಲಿ ವೀರಶೈವ ಲಿಂಗಾಯತ ಸಮುದಾಯದವರೊಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಬಿಜೆಪಿಯಲ್ಲಿ ಒಲವು ಮೂಡಿದೆ. ಆ ಪೈಕಿ ಬೆಳಗಾವಿಯ ಸುರೇಶ್ ಅಂಗಡಿ ಹೆಸರು ಅಗ್ರಸ್ಥಾನದಲ್ಲಿದೆ. ನಂತರದ ಸ್ಥಾನದಲ್ಲಿ ಹಾವೇರಿಯ ಶಿವಕುಮಾರ್ ಉದಾಸಿ, ಬೀದರ್‌ನ ‘ಗವಂತ ಖೂಬಾ, ಕೊಪ್ಪಳದ ಕರಡಿ ಸಂಗಣ್ಣ ಅವರ ಹೆಸರುಗಳು ಕೇಳಿಬರುತ್ತಿವೆ.
ಅಚ್ಚರಿ ಎಂಬಂತೆ ರಾಜ್ಯಸಭಾ ಸದಸ್ಯರಾದ ಬಸವರಾಜ ಪಾಟೀಲ ಸೇಡಂ ಹಾಗೂ ಪ್ರಭಾಕರ್ ಕೋರೆ ಅವರ ಹೆಸರುಗಳೂ ತೇಲಿಬರುತ್ತಿವೆ. ಇನ್ನು ಧಾರವಾಡ ಸಂಸದ ಹಾಗೂ ಮಾಜಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಶಿ ಅವರ ಹೆಸರೂ ಪರಿಶೀಲನೆಯಲ್ಲಿದೆ.
ರಾಜ್ಯದ ಸಂಸದರ ಪೈಕಿ ಅತ್ಯಂತ ಕ್ರಿಯಾಶೀಲ ಎಂಬ ಹೆಸರು ಗಳಿಸಿರುವ ಜೋಶಿ ಅವರ ಕಾರ್ಯವೈಖರಿ ಬಗ್ಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರಿಗೂ ಮೆಚ್ಚುಗೆಯಿದೆ. ಆದರೆ, ಬ್ರಾಹ್ಮಣ ಸಮುದಾಯಕ್ಕೆ ಸೇರಿದ ಅನಂತಕುಮಾರ್ ಅವರು ಸಂಪುಟದಲ್ಲಿ ಇರುವುದರಿಂದ ಮತ್ತೊಬ್ಬರಿಗೆ ಅವಕಾಶ ನೀಡಲಾಗುತ್ತದೆಯೇ ಎಂಬುದೇ ಜೋಶಿ ಅವರಿಗೆ ಅಡ್ಡಗಾಲಾಗಿ ಪರಿಣಮಿಸಿದೆ. ಅದನ್ನು ಮೀರಿ ಪರಿಗಣಿಸಿದಲ್ಲಿ ಪ್ರಹ್ಲಾದ್ ಜೋಶಿ ಕೇಂದ್ರ ಸಚಿವರಾಗುವ ಸಾಧ್ಯತೆಯಿದೆ.
ಚುನಾವಣಾ ದೃಷ್ಟಿಯಿಂದ ಜಾತಿ ಸಮೀಕರಣಕ್ಕೇ ಹೆಚ್ಚು ಒತ್ತು ನೀಡಿದಲ್ಲಿ ಪರಿಶಿಷ್ಟ ಪಂಗಡದ ವಾಲ್ಮೀಕಿ ಜನಾಂಗಕ್ಕೆ ಸೇರಿದ ಬಳ್ಳಾರಿಯ ಬಿ.ಶ್ರೀರಾಮುಲು ಅವರೂ ಸಚಿವರಾಗುವ ಸಾ‘್ಯತೆಯನ್ನು ಅಲ್ಲಗಳೆಯುವಂತಿಲ್ಲ
