ವಿಂಗ್ ಕಮಾಂಡರ್ ಅಭಿನಂದನ್‌ಗೆ 'ಭಗವಾನ್ ಮಹಾವೀರ್ ಅಹಿಂಸಾ ಪುರಸ್ಕಾರ'| ಅಖಿಲ ಭಾರತೀಯ ದಿಗಂಬರ ಜೈನ ಮಹಾಸಮಿತಿ ನಿರ್ಧಾರ| ಏ.17ರ ಭಗವಾನ್ ಮಹಾವೀರ್  ಜಯಂತಿ ದಿನದಂದು ಅಭಿನಂದನ್ ಅವರಿಗೆ ಸನ್ಮಾನ| ಅಭಿನಂದನ್ ಈ ಪ್ರಶಸ್ತಿ ಸ್ವೀಕರಿಸಲಿರುವ ಮೊದಲ ವ್ಯಕ್ತಿ|

ನವದೆಹಲಿ(ಮಾ.03): ಭಾರತೀಯ ವಾಯುಪಡೆಯ ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್ ಅವರಿಗೆ 'ಭಗವಾನ್ ಮಹಾವೀರ್ ಅಹಿಂಸಾ ಪುರಸ್ಕಾರ' ನೀಡಿ ಗೌರವಿಸಲಾಗುವುದು ಎಂದು ಅಖಿಲ ಭಾರತೀಯ ದಿಗಂಬರ ಜೈನ ಮಹಾಸಮಿತಿ ತಿಳಿಸಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಇದೇ ಏ.17ರ ಭಗವಾನ್ ಮಹಾವೀರ್ ಜಯಂತಿ ದಿನದಂದು ಅಭಿನಂದನ್ ಅವರಿಗೆ ಈ ಪುರಸ್ಕಾರ ನೀಡಲಾಗುವುದು ಅಖಿಲ ಭಾರತೀಯ ದಿಗಂಬರ ಜೈನ ಮಹಾಸಮಿತಿ ತಿಳಿಸಿದೆ.

ಈ ಪ್ರಶಸ್ತಿ 2.51 ಲಕ್ಷ ರೂ. ನೆನಪಿನ ಕಾಣಿಕೆ ಮತ್ತು ಪ್ರಮಾಣಪತ್ರ ಒಳಗೊಂಡಿರುತ್ತದೆ ಎಂದು ಭಾರತೀಯ ದಿಗಂಬರ ಜೈನ ಮಹಾಸಮಿತಿ ತಿಳಿಸಿದೆ.

ಅಭಿನಂದನ್ ಈ ಪ್ರಶಸ್ತಿ ಸ್ವೀಕರಿಸಲಿರುವ ಮೊದಲ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ. 

ಪಾಕಿಸ್ತಾನದ ಎಫ್-16 ವಿಮಾನವನ್ನು ಬೆನ್ನಟ್ಟಿ ಹೊಡೆದುರುಳಿಸಿದ ಮಿಗ್-21 ವಿಮಾನದ ಪೈಲಟ್ ಅಭಿನಂದನ್ ಅವರಿಗೆ ಈ ಪುರಸ್ಕಾರ ನೀಡಿ ಗೌರವಿಸಲಾಗುವುದು ಎಂದು ಮಹಾಸಮಿತಿಯ ಅಧ್ಯಕ್ಷ ಮುನೀಂದ್ರ ಜೈನ್ ತಿಳಿಸಿದ್ದಾರೆ.