ಗುಜರಾತ್ ಚುನಾವಣೆ ಕಾವು ಕಡಿಮೆಯಾಗಿದೆ ತಡ ಇಂದು ಕೇಂದ್ರ ಸರ್ಕಾರದ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು, ಮತ್ತೊಂದು ಸುತ್ತಿನಲ್ಲಿ ಕೇಂದ್ರ ಸರ್ಕಾರವನ್ನು ಹಣಿಯಲು ವಿಪಕ್ಷಗಳು ಸಿದ್ಧವಾಗಿವೆ.
ನವದೆಹಲಿ (ಡಿ.15): ಗುಜರಾತ್ ಚುನಾವಣೆ ಕಾವು ಕಡಿಮೆಯಾಗಿದೆ ತಡ ಇಂದು ಕೇಂದ್ರ ಸರ್ಕಾರದ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು, ಮತ್ತೊಂದು ಸುತ್ತಿನಲ್ಲಿ ಕೇಂದ್ರ ಸರ್ಕಾರವನ್ನು ಹಣಿಯಲು ವಿಪಕ್ಷಗಳು ಸಿದ್ಧವಾಗಿವೆ.
ಚಳಿಗಾಲದ ಅಧಿವೇಶನದಲ್ಲಿ 25 ಮಸೂದೆಗಳ ಅಂಗೀಕಾರಕ್ಕೆ ಸರ್ಕಾರ ಯತ್ನಿಸಲಿದೆ. ಮಳೆಗಾಲದ ಅಧಿವೇಶನದ ನಂತರ ಸರ್ಕಾರ ಹೊರಡಿಸಿರುವ ಏಳು ಸುಗ್ರೀವಾಜ್ಞೆಗಳಿಗೆ ಸಂಬಂಧಿಸಿದ ಮಸೂದೆ ಅಂಗೀಕಾರವಾಗುವಂತೆ ನೋಡಿಕೊಳ್ಳಲು ಸರ್ಕಾರ ಆದ್ಯತೆ ನೀಡಲಿದೆ. ತ್ರಿವಳಿ ತಲಾಖ್‌ಗೆ ಸಂಬಂಧಿಸಿದ ‘ಮುಸ್ಲಿಂ ಮಹಿಳೆಯರ ಮಸೂದೆ’ ಮತ್ತು ರಾಷ್ಟ್ರೀಯ ಹಿಂದುಳಿದ ವರ್ಗಗಳ ಆಯೋಗಕ್ಕೆ ಸಾಂವಿಧಾನಿಕ ಸ್ಥಾನಮಾನ ನೀಡುವ ಮಸೂದೆ ಬಗ್ಗೆ ಚರ್ಚೆ ನಡೆಯುವ ನಿರೀಕ್ಷೆ ಇದೆ. ಮಳೆಗಾಲದ ಅಧಿವೇಶನದ ಬಳಿಕ ಕೇಂದ್ರ ಸರ್ಕಾರವು ಭಾರತೀಯ ಅರಣ್ಯಗಳ ಕಾಯ್ದೆ ತಿದ್ದುಪಡಿ, ದಿವಾಳಿ ಸಂಹಿತೆ, ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಮತ್ತು ಬ್ಯಾಂಕಿಂಗ್ ವ್ಯವಸ್ಥೆ ನಿಯಂತ್ರಣ ಕಾನೂನುಗಳ ಬಗ್ಗೆ ಕಾರ್ಯಕಾರಿ ಆದೇಶ ಹೊರಡಿಸಿತ್ತು ಈ ಎಲ್ಲವೂಗಳ ಬಗ್ಗೆಯೂ ಚರ್ಚಿಸುವ ನಿರೀಕ್ಷೆ ಇದೆ. ಇನ್ನು ಕೇಂದ್ರ ಸರ್ಕಾರವನ್ನು ಹಣಿಯಲು ಪ್ರತಿಪಕ್ಷಗಳು ಸಜ್ಜಾಗಿವೆ.
