ಆಧಾರ್ ಕಾರ್ಡ್ ಇಲ್ಲ ಎಂಬ ಕಾರಣಕ್ಕೆ ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ಯೋಧನ ಪತ್ನಿಗೆ ಖಾಸಗಿ ಆಸ್ಪತ್ರೆಯೊಂದು ಚಿಕಿತ್ಸೆ ನೀಡಲು ನಿರಾಕರಿಸಿದ್ದರಿಂದ, ಅವರು ಸಾವನ್ನಪ್ಪಿರುವ ಆಘಾತಕಾರಿ ಘಟನೆ ಹರ್ಯಾಣದ ಸೋನಿಪತ್‌ನಲ್ಲಿ ನಡೆದಿದೆ.
ರೋಹಟಕ್(ಡಿ.31): ಆಧಾರ್ ಕಾರ್ಡ್ ಇಲ್ಲ ಎಂಬ ಕಾರಣಕ್ಕೆ ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ಯೋಧನ ಪತ್ನಿಗೆ ಖಾಸಗಿ ಆಸ್ಪತ್ರೆಯೊಂದು ಚಿಕಿತ್ಸೆ ನೀಡಲು ನಿರಾಕರಿಸಿದ್ದರಿಂದ, ಅವರು ಸಾವನ್ನಪ್ಪಿರುವ ಆಘಾತಕಾರಿ ಘಟನೆ ಹರ್ಯಾಣದ ಸೋನಿಪತ್ನಲ್ಲಿ ನಡೆದಿದೆ.
ಆದರೆ, ಆಧಾರ್ ಕಾರ್ಡ್ ಇಲ್ಲ ಎಂಬ ಕಾರಣಕ್ಕೆ ಯಾರಿಗೂ ಚಿಕಿತ್ಸೆ ನಿರಾಕರಿಸಿದ ಆರೋಪವನ್ನು ಆಸ್ಪತ್ರೆ ತಳ್ಳಿ ಹಾಕಿದೆ. ಕಾರ್ಗಿಲ್ನಲ್ಲಿ ಹುತಾತ್ಮರಾದ ಯೋಧ ಹವಾಲ್ದಾರ್ ಲಕ್ಷ್ಮಣ್ ದಾಸ್ ಅವರ ಪತ್ನಿ ಶಕುಂತಲಾ ದೇವಿ ಗಂಟಲು ಕ್ಯಾನ್ಸರ್, ಹೃದಯ ಸಂಬಂಧಿ ಕಾಯಿಲೆಗೆ ತುತ್ತಾಗಿದ್ದರು. ಹಾಗಾಗಿ, ಶಕುಂತಲಾರನ್ನು ಪುತ್ರ ಪವನ್ ಕುಮಾರ್ ಮತ್ತು ಸೋದರ ಸಂಬಂಧಿ ರವೀಂದರ್ ಅವರು ಆಸ್ಪತ್ರೆಗೆ ಕರೆತಂದಿದ್ದರು.
ಆದರೆ, ಶಕುಂತಲಾ ಅವರ ಆಧಾರ್ ನೀಡುವಂತೆ ಆಸ್ಪತ್ರೆ ಸಿಬ್ಬಂದಿ ಒತ್ತಾಯಿಸಿದರು. ಆದರೆ, ಈ ಎಲ್ಲ ಆರೋಪಗಳನ್ನು ತಳ್ಳಿಹಾಕಿರುವ ಆಸ್ಪತ್ರೆಯ ವೈದ್ಯೆ ಡಾ.ದಿವ್ಯಾ ಸಕ್ಸೇನಾ,‘ರೋಗಿಯನ್ನು ಅವರ ಕುಟುಂಬಸ್ಥರೇ ಮತ್ತೊಂದು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಈ ವೇಳೆ ಮಾರ್ಗಮಧ್ಯೆ ಮಹಿಳೆ ಮೃತಪಟ್ಟಿದ್ದಾರೆ,’ ಎಂದು ಹೇಳಿದ್ದಾರೆ.
