ಕೇರಳದಲ್ಲಿ ಮಹಿಳಾ ಪೇದೆಗೆ ಬೆಂಕಿ ಇಟ್ಟಪುರುಷ ಪೊಲೀಸ್| ಆರೋಪಿಗೆ ಐಸಿಯುನಲ್ಲಿ ಚಿಕಿತ್ಸೆ
ಮಾವೆಲಿಕ್ಕರ[ಜೂ.16]: 34 ವರ್ಷದ ಮಹಿಳಾ ಪೇದೆಯೊಬ್ಬರಿಗೆ ಹರಿತ ಆಯುಧದಿಂದ ಹಲ್ಲೆ ನಡೆಸಿದ ಪೊಲೀಸ್ ಸಿಬ್ಬಂದಿಯೊಬ್ಬ, ಬಳಿಕ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಂದಿರುವ ಘಟನೆ ಕೇರಳದಲ್ಲಿ ನಡೆದಿದೆ. ಮೃತರನ್ನು ಸೌಮ್ಯ ಪುಷ್ಪಾಕರನ್ ಎಂದು ಗುರುತಿಸಲಾಗಿದೆ.
ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದಾಗ ಈಕೆಯನ್ನು ಸಂಚಾರಿ ಪೊಲೀಸ್ ಸಿಬ್ಬಂದಿಯಾದ ಅಜಸ್ ಕಾರಿನಲ್ಲಿ ಹಿಂಬಾಲಿಸಿ ಸೌಮ್ಯ ಅವರ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆಸಿದ್ದಾನೆ. ಬಳಿಕ ಆಕೆಯ ಮೇಲೆ ಹರಿತ ಆಯುಧದಿಂದ ಹಲ್ಲೆ ನಡೆಸಿದ್ದಾನೆ. ತಪ್ಪಿಸಿಕೊಳ್ಳಲು ಸಮೀಪದ ಮನೆಯೊಂದಕ್ಕೆ ತೆರಳಿದ ಸೌಮ್ಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಆಕೆ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ.
ಆರೋಪಿಗೂ ಶೇ.40 ರಷ್ಟುಸುಟ್ಟಗಾಯಗಳಾಗಿದ್ದು, ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸೌಮ್ಯ ಪತಿ ವಿದೇಶದಲ್ಲಿದ್ದು, ಈ ದಂಪತಿಗೆ ಮೂರು ಮಕ್ಕಳಿದ್ದಾರೆ.
