ಲಿಫ್ಟ್ ಕೋಡೊದಾಗಿ ನಂಬಿಸಿ ರೇಪ್: ಟ್ಯಾಕ್ಸಿ ಚಾಲಕ ಅರೆಸ್ಟ್!

Woman raped by taxi driver in Goa, accused held
Highlights

ಒಂಟಿ ಮಹಿಳೆ ಮೇಲೆ ಟ್ಯಾಕ್ಸಿ ಚಾಲಕನಿಂದ ರೇಪ್

ವಾಸ್ಕೋ ವಿಮಾನ ನಿಲ್ದಾಣ ರಸ್ತೆ ಬಳಿ ಘಟನೆ

ಲಿಫ್ಟ್ ಕೊಡುವುದಾಗಿ ನಂಬಿಸಿ ಅತ್ಯಾಚಾರ

ಆರೋಪಿ ಚಾಲಕನನ್ನು ಬಂಧಿಸಿದ ಪೊಲೀಸರು

ಪಣಜಿ(ಜೂ.29): ವಾಸ್ಕೋ ವಿಮಾನ ನಿಲ್ದಾಣ ಸಮೀಪ 20 ವರ್ಷದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಟ್ಯಾಕ್ಸಿ ಚಾಲಕನನ್ನು ಬಂಧಿಸಲಾಗಿದೆ. 

ಈ ಕುರಿತು ಮಾಹಿತಿ ನೀಡಿರುವ ಪೊಲೀಸರು, ನಿನ್ನೆ ಸಂಜೆ ವಿಮಾನ ನಿಲ್ದಾಣ ರಸ್ತೆಯಲ್ಲಿ ಒಂಟಿಯಾಗಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆ ಮೇಲೆ ಆರೋಪಿ ಚಾಲಕ ರವಿಚಂದ್ರ ಭಟ್ ಅತ್ಯಾಚಾರ ಎಸಗಿದ್ದಾನೆ ಎಂದು ತಿಳಿಸಿದ್ದಾರೆ.

ಆರೋಪಿ ರವಿಚಂದ್ರ ಭಟ್, ವಿಮಾನ ನಿಲ್ದಾಣ ರಸ್ತೆಯಲ್ಲಿ ಒಂಟಿಯಾಗಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಗೆ ಲಿಫ್ಟ್ ಕೊಡುವುದಾಗಿ ಹೇಳಿ ಬಲವಂತವಾಗಿ ಕಾರಿಗೆ ಹತ್ತಿಸಿಕೊಂಡು, ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಆಕೆ ಮೇಲೆ ಅತ್ಯಾಚಾರ ಎಸಗಿದ್ದಾನೆ ಎನ್ನಲಾಗಿದೆ.

ಈ ಕುರಿತು ವಾಸ್ಕೋ ಪೊಲೀಸ್ ಇನ್ಸ್‌ಪೆಕ್ಟರ್ ನೋಲಸ್ಕೋ ರಪೊಸೊ ಮಾಹಿತಿ ನೀಡಿದ್ದು, ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ಇಂದು ಬೆಳಗ್ಗೆ ಆರೋಪಿ ಟ್ಯಾಕ್ಸಿ ಚಾಲಕನನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.

loader