ತೋಟದಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ಮೇಲೆ ಅತ್ಯಾಚಾರ ಮಾಡಲು ಯತ್ನಿಸಿದ್ದಾನೆ. ಈ ವೇಳೆ ಮಹಿಳೆ ಮಧನ್ ಮರ್ಮಾಂಗಕ್ಕೆ ಬಲವಾಗಿ ಒದ್ದಿದ್ದಾಳೆ.  ಪರಿಣಾಮ ಮದನ್ ಸಾವನ್ನಪ್ಪಿದ್ದಾನೆ. ಈ ಸಂಬಂಧ ಮಂಚೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮಹಿಳೆಯನ್ನು ಬಂಧಿಸಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಚಿಕ್ಕಬಳ್ಳಾಪುರ(ನ.29): ಅತ್ಯಾಚಾರಕ್ಕೆತ್ನಿಸಿದ ವ್ಯಕ್ತಿಯನ್ನು ಮಹಿಳೆಯೇ ಮರ್ಮಾಂಗಕ್ಕೆ ಒದ್ದು ಕೊಲೆ ಮಾಡಿರುವ ಘಟನೆ ಗೌರಿಬಿದನೂರು ತಾಲೂಕಿನ ಕುಂಟಚಿಕ್ಕನಹಳ್ಳಿಯಲ್ಲಿ ನಡೆದಿದೆ. 38 ವರ್ಷದ ಮದನ್ ಗೋಪಾಲ್ ಕೊಲೆಯಾದವ.

ಈತ ತೋಟದಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ಮೇಲೆ ಅತ್ಯಾಚಾರ ಮಾಡಲು ಯತ್ನಿಸಿದ್ದಾನೆ. ಈ ವೇಳೆ ಮಹಿಳೆ ಮಧನ್ ಮರ್ಮಾಂಗಕ್ಕೆ ಬಲವಾಗಿ ಒದ್ದಿದ್ದಾಳೆ. ಪರಿಣಾಮ ಮದನ್ ಸಾವನ್ನಪ್ಪಿದ್ದಾನೆ. ಈ ಸಂಬಂಧ ಮಂಚೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮಹಿಳೆಯನ್ನು ಬಂಧಿಸಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.