ಊರಿನಲ್ಲಿ ನಡೆಯುತ್ತಿದ್ದ ಅಕ್ರಮ ಮರಳು ದಂಧೆ, ಮದ್ಯ ಮಾರಾಟ, ಅತ್ಯಾಚಾರ ಮುಂತಾದ ಕಾನೂನುಬಾಹಿರ ಕೃತ್ಯಗಳ ಬಗ್ಗೆ ಆಲೂರು ಪೊಲೀಸರಿಗೆ ಮಾಹಿತಿ ನೀಡುತ್ತಿದ್ದಳು.

ಹಾಸನ(ನ.24): ಕಾನೂನು ಬಾಹಿರ ಚಟುವಟಿಕೆಗಳನ್ನು ಪೊಲೀಸರಿಗೆ ತಿಳಿಸಿದ ಪೊಲೀಸ್ ಇನ್ಫಾರ್ಮರ್ ಮೇಲೆಯೇ ಅಮಾನುಷವಾಗಿ, ವಿವಸ್ತ್ರಗೊಳಿಸಿ ಹಲ್ಲೆ ನಡೆಸಿರುವ ಘಟನೆ ಹಾಸನದಲ್ಲಿ ನಡೆದಿದೆ. ವಾರದ ಹಿಂದೆ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಬೈರಾಪುರದ ಗಿರಿಜಾ ಪೊಲೀಸ್ ಇನ್ಫಾರ್ಮರ್ ಆಗಿಯೂ ಸಹ ಕಾರ್ಯನಿರ್ವಹಿಸುತ್ತಿದ್ದಳು.

ಊರಿನಲ್ಲಿ ನಡೆಯುತ್ತಿದ್ದ ಅಕ್ರಮ ಮರಳು ದಂಧೆ, ಮದ್ಯ ಮಾರಾಟ, ಅತ್ಯಾಚಾರ ಮುಂತಾದ ಕಾನೂನುಬಾಹಿರ ಕೃತ್ಯಗಳ ಬಗ್ಗೆ ಆಲೂರು ಪೊಲೀಸರಿಗೆ ಮಾಹಿತಿ ನೀಡುತ್ತಿದ್ದಳು. ಈ ವಿಷಯ ಸೋರಿಕೆಯಾಗಿದ್ದು, ಇದರಿಂದ ಕುಪಿತಗೊಂಡ ಭೈರಾಪುರ ಗ್ರಾಮದ ಶೇಖರ್, ಮನು, ರಾಧಾಮಣಿ ಸೇರಿದಂತೆ ಸುಮಾರು 20 ಮಂದಿ ಆಕೆಯನ್ನು ವಿವಸ್ತ್ರಗೊಳಿಸಿ, ಮನಬಂದಂತೆ ಹಲ್ಲೆ ನಡೆಸಿದ್ದಾರೆ. ಆದರೆ ಈ ವೇಳೆ ಊರಿನ ಯಾರೊಬ್ಬರೂ ಆಕೆಯ ಸಹಾಯಕ್ಕೆ ಬಂದಿಲ್ಲ. ಈ ಸಂಬಂಧ ಆಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.