ರಾಹುಲ್ ಪ್ರಧಾನಿಯಾಗಲಿ ಎಂದ ಬಿಜೆಪಿಗ

Would Like To See Rahul Gandhi As Prime Minister: Sudheendra Kulkarni
Highlights

ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ದೇಶದ ಪ್ರಧಾನಿಯಾಗಿ ನೋಡಲು ಬಯಸುತ್ತೇನೆ ಎಂದು ಬಿಜೆಪಿ ಹಿರಿಯ ನಾಯಕ ಎಲ್.ಕೆ. ಅಡ್ವಾಣಿ ಅವರ ಮಾಜಿ ಆಪ್ತರಾದ ಸುಧೀಂದ್ರ ಕುಲಕರ್ಣಿ ಅವರು ಹೇಳಿದ್ದಾರೆ. 

ಮುಂಬೈ: ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ದೇಶದ ಪ್ರಧಾನಿಯಾಗಿ ನೋಡಲು ಬಯಸುತ್ತೇನೆ ಎಂದು ಬಿಜೆಪಿ ಹಿರಿಯ ನಾಯಕ ಎಲ್.ಕೆ. ಅಡ್ವಾಣಿ ಅವರ ಮಾಜಿ ಆಪ್ತರಾದ ಸುಧೀಂದ್ರ ಕುಲಕರ್ಣಿ ಅವರು ಹೇಳಿದ್ದಾರೆ. 

ಅಲ್ಲದೆ, ರಾಹುಲ್ ಒಳ್ಳೆಯ ಹೃದಯ ಇರುವ ನಾಯಕ ಎಂದು ಕೊಂಡಾ ಡಿದ್ದಾರೆ. ಸೋಮವಾರ ಇಲ್ಲಿ ಅಖಿಲ ಭಾರತ ಕಾಂಗ್ರೆಸ್ ವೃತ್ತಿಪರರು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿ, ಇಂದು ದೇಶ ಎದುರಿಸುತ್ತಿರುವ ಕಾಶ್ಮೀರ ಸೇರಿ ಇನ್ನಿತರ ದೊಡ್ಡ ಸಮಸ್ಯೆಗಳನ್ನು ಪರಿಹರಿಸುವ ಸಾಮರ್ಥ್ಯವಿರುವ ನಾಯಕ ದೇಶಕ್ಕೆ ಅಗತ್ಯವಾಗಿ ಬೇಕಿದೆ. ಆದರೆ, ಸಮಸ್ಯೆ ಪರಿಹರಿಸುವಲ್ಲಿ ಪ್ರಧಾನಿ ಮೋದಿ ವಿಫಲರಾಗಿದ್ದಾರೆ ಎಂದು ಟೀಕಿಸಿದರು. 

loader