ಸನ್ನಿ ನೈಟ್ಸ್ ಕಾರ್ಯಕ್ರಮಕ್ಕೆ ಪೊಲೀಸರು ಅನುಮತಿ ನೀಡಲು ನಿರಾಕರಿಸಿದ್ದರಿಂದ ಅನುಮತಿ ಕೋರಿ ಕಾರ್ಯಕ್ರಮ ಆಯೋಜಕ ಹರೀಶ್ ಹೈಕೋರ್ಟ್ಗೆ ರಿಟ್ ಸಲ್ಲಿಸಿದ್ದಾರೆ.
ಬೆಂಗಳೂರು (ಡಿ.18): ಸನ್ನಿ ನೈಟ್ಸ್ ಕಾರ್ಯಕ್ರಮಕ್ಕೆ ಪೊಲೀಸರು ಅನುಮತಿ ನೀಡಲು ನಿರಾಕರಿಸಿದ್ದರಿಂದ ಅನುಮತಿ ಕೋರಿ ಕಾರ್ಯಕ್ರಮ ಆಯೋಜಕ ಹರೀಶ್ ಹೈಕೋರ್ಟ್ಗೆ ರಿಟ್ ಸಲ್ಲಿಸಿದ್ದಾರೆ.
ಮಾನ್ಯತಾ ಟೆಕ್ ಪಾರ್ಕ್ನಲ್ಲಿ ಸನ್ನಿ ನೈಟ್ಸ್ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಭಾರತೀಯ ಸಂಸ್ಕೃತಿಗೆ ಯಾವುದೇ ಧಕ್ಕೆ ಆಗಲ್ಲ. ಅಗತ್ಯ ಭದ್ರತೆಗೆ ಸಿಬ್ಬಂದಿ ನೇಮಕ ಮಾಡಿಕೊಳ್ಳಲಾಗಿದೆ. ಪೊಲೀಸರಿಂದ ಕೆಲವೇ ಸಿಬ್ಬಂದಿ ಹಾಗೂ ಅನುಮತಿ ಕೋರಲಾಗಿದೆ. ಗೃಹ ಇಲಾಖೆ ಹಾಗೂ ಪೊಲೀಸರು ಅನುಮತಿಗೆ ನಿರಾಕರಿಸಿದ್ದಾರೆ. ಕೆಲ ಸಂಘಟನೆಗಳಿಂದಲೂ ಕಾರ್ಯಕ್ರಮಕ್ಕೆ ವಿರೋಧ ವ್ಯಕ್ತವಾಗಿದೆ. ಸಂಘಟನೆಗಳಿಂದ ಪೊಲೀಸ್ ರಕ್ಷಣೆ ಬೇಕಿದೆ ಎಂದು ಹರೀಶ್ ಅರ್ಜಿಯಲ್ಲಿ ಹೇಳಿದ್ದಾರೆ.
ನಾಳೆ ರಿಟ್ ಅರ್ಜಿ ವಿಚಾರಣೆ ಬರುವ ಸಾಧ್ಯತೆ ಇದೆ.
