ಜಿಲ್ಲೆಯ ಪಾಂಡವಪುರ ಪಟ್ಟಣದಲ್ಲಿ ಇಂದು ರೈತ ಸಮಾವೇಶ ನಡೆಯುತ್ತಿತ್ತು.  ರೈತ ಸಮಾವೇಶದಲ್ಲಿ ಪಾಲ್ಗೊಂಡ ಸಾಹಿತಿ ದೇವನೂರು ಮಹಾದೇವ ರೈತರ ಪಕ್ಷ ಎಂದೇ ಬಿಂಬಿತವಾಗಿರುವ ಜೆಡಿಎಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ರಾಜಕೀಯ ಪಕ್ಷಗಳನ್ನು ತೆಗಳುವ  ಭರದಲ್ಲಿ  ಜೆಡಿಎಸ್ ಪಕ್ಷವನ್ನು ಓತೀಕ್ಯಾತಕ್ಕೆ ಹೋಲಿಕೆ ಮಾಡಿದ್ದಾರೆ.

ಮಂಡ್ಯ (ಸೆ.22): ಜಿಲ್ಲೆಯ ಪಾಂಡವಪುರ ಪಟ್ಟಣದಲ್ಲಿ ಇಂದು ರೈತ ಸಮಾವೇಶ ನಡೆಯುತ್ತಿತ್ತು. ರೈತ ಸಮಾವೇಶದಲ್ಲಿ ಪಾಲ್ಗೊಂಡ ಸಾಹಿತಿ ದೇವನೂರು ಮಹಾದೇವ ರೈತರ ಪಕ್ಷ ಎಂದೇ ಬಿಂಬಿತವಾಗಿರುವ ಜೆಡಿಎಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ರಾಜಕೀಯ ಪಕ್ಷಗಳನ್ನು ತೆಗಳುವ ಭರದಲ್ಲಿ ಜೆಡಿಎಸ್ ಪಕ್ಷವನ್ನು ಓತೀಕ್ಯಾತಕ್ಕೆ ಹೋಲಿಕೆ ಮಾಡಿದ್ದಾರೆ.

ಸಾಹಿತಿ ದೇವನೂರು ಮಾಹದೇವ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಜೆಡಿಎಸ್ ಪಕ್ಷವನ್ನು ಓತಿಕ್ಯಾತಿ ಪಕ್ಷವೆಂದು ಬಹಿರಂಗ ಹೇಳಿಕೆ ನೀಡಿ ವಿವಾದವನ್ನು ದೇವನೂರು ಮಾಹದೇವ ಅವರು ಮೈ ಮೇಲೆ ಎಳೆದುಕೊಂಡಿದ್ದಾರೆ. ಮಂಡ್ಯ ಜಿಲ್ಲೆಯ ಪಾಂಡವಪುರ ಪಟ್ಟಣದಲ್ಲಿ ಆಯೋಜಿಸಿದ್ದ ರೈತರ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡುತ್ತಾ ರೈತರ ಸಮಸ್ಯೆ ನಿವಾರಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರದ ಬಗ್ಗೆ ವಿಫಲವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ರು. ರಾಜಕೀಯ ಪಕ್ಷವನ್ನು ತೆಗಳುವ ಭರದಲ್ಲಿ ರಾಜ್ಯದ ಜೆಡಿಎಸ್ ಪಕ್ಷವನ್ನು ಓತೀಕ್ಯಾತಕ್ಕೆ ಹೋಲಿಕೆ ಮಾಡಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.