ರಾಯಚೂರು [ಜು.27]: ಬಿಜೆಪಿ ರಾಜ್ಯದಲ್ಲಿ ಅಧಿಕಾರ ಗದ್ದುಗೆಗೆ ಏರಿದೆ. ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುತ್ತಿದ್ದಾರೆ. ಇದೇ ಬೆನ್ನಲ್ಲೇ ಸಚಿವ ಸ್ಥಾನಕ್ಕೆ  ಲಾಬಿ ಶುರುವಾಗಿದೆ. 

ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಗೆ ಸಚಿವ  ಸ್ಥಾನ ನೀಡಬೇಕು ಎಂದು ಬಿಸಿಲು ನಾಡು ರಾಯಚೂರು ಜಿಲ್ಲೆಯ ನಾಯಕರು ಒತ್ತಾಯಿಸಿದ್ದಾರೆ. 

ಚಿತ್ರದುರ್ಗ ಜಿಲ್ಲೆ ಹಿರಿಯೂರು ಕ್ಷೇತ್ರದ ಶಾಸಕಿ ಶ್ರೀಮತಿ ಪೂರ್ಣಿಮಾ ಶ್ರೀನಿವಾಸ್ ಯಾದವ ಸಮುದಾಯದಿಂದ ಬಂದಿದ್ದು, ಸಮುದಾಯದ ಹಿತದೃಷ್ಟಿಯಿಂದಾಗಿ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಆಗ್ರಹಿಸಲಾಗಿದೆ. 

ರಾಜ್ಯ ರಾಜಕೀಯದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ

ಸಿಎಂ ಯಡಿಯೂರಪ್ಪಗೆ ಸಮುದಾಯದ ಮುಖಂಡರು ಒತ್ತಾಯಿಸಿದ್ದು, ಶೈಕ್ಷಣಿಕವಾಗಿ, ಸಾಮಾಜಿಕವಾಗಿ ಯಾದವ ಸಮಾಜ ಅತೀ ಹಿಂದುಳಿದಿದೆ. ಸಮಾಜದಿಂದ ಆಯ್ಕೆ ಆಗಿರುವ ಏಕೈಕ ಶಾಸಕಿ ಪೂರ್ಣಿಮಾ ಅವರಿಗೆ ಸಚಿವ ಸ್ಥಾನ ನೀಡಬೇಕು. ಸಚಿವ ಸ್ಥಾನ ನೀಡಿ ಯಾದವ ಸಮುದಾಯಕ್ಕೆ ಪ್ರಾತಿನಿಧ್ಯ ನೀಡುವಂತೆ ಒತ್ತಾಯಿಸಿದ್ದಾರೆ.