ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟ ತೀವ್ರಗೊಳಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ .ಯಡಿಯೂರಪ್ಪ, ಇನ್ನು 2-3 ದಿನಗಳಲ್ಲಿ ಸಿದ್ದರಾಮಯ್ಯ ಸೇರಿದಂತೆ ಅವರ ಸಚಿವ ಸಂಪುಟದ ಭ್ರಷ್ಟಾಚಾರ ಬಯಲಿಗೆಳೆಯುತ್ತೇವೆ ಎಂದು ಗುಡುಗಿದ್ದಾರೆ.

ಬೆಂಗಳೂರು(ಸೆ.14): ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟ ತೀವ್ರಗೊಳಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ .ಯಡಿಯೂರಪ್ಪ, ಇನ್ನು 2-3 ದಿನಗಳಲ್ಲಿ ಸಿದ್ದರಾಮಯ್ಯ ಸೇರಿದಂತೆ ಅವರ ಸಚಿವ ಸಂಪುಟದ ಭ್ರಷ್ಟಾಚಾರ ಬಯಲಿಗೆಳೆಯುತ್ತೇವೆ ಎಂದು ಗುಡುಗಿದ್ದಾರೆ.

ಈ ಕುರಿತಂತೆ ಚಾರ್ಜ್‌ಶೀಟ್ ಬಿಡುಗಡೆ ಮಾಡುವುದಾಗಿ ಹೇಳಿರುವ ಯಡಿಯೂರಪ್ಪ ಅವರು, ಸಿದ್ದರಾಮಯ್ಯ, ಅವರ ಕುಟುಂಬಸ್ಥರು, ಮೂರ್ನಾಲ್ಕು ಸಚಿವರು, ಶಾಸಕರು, ಕೆಂಪಯ್ಯ ಹೆಸರು ಚಾಜ್ ಶೀರ್ಟ್‌ನಲ್ಲಿ ಇರಲಿದೆ ಎಂಬ ಸುಳಿವನ್ನೂ ನೀಡಿದ್ದಾರೆ. ಇದೇ ವೇಳೆ, ಸಚಿವ ಎಂ.ಬಿ.ಪಾಟೀಲ್ ಅವರ ಜಲ ಸಂಪನ್ಮೂಲ ಇಲಾಖೆಯಲ್ಲೂ ಭಾರಿ ಅವ್ಯವಹಾರ ನಡೆದಿದ್ದು, ಆ ಬಗ್ಗೆಯೂ ದಾಖಲೆ ಬಿಡುಗಡೆ ಮಾಡುತ್ತೇನೆ ಎಂದಿರುವ ಯಡಿಯೂರಪ್ಪ, ಅವರ ರಾಜೀನಾಮೆಗೆ ಒತ್ತಾಯಿಸಿ ಅ.23ರಂದು ವಿಜಯಪುರದಲ್ಲಿ ಬೃಹತ್ ಪ್ರತಿ‘ಟನೆ ನಡೆಸುವುದಾಗಿಯೂ ತಿಳಿಸಿದ್ದಾರೆ.

ಕೆಂಪಯ್ಯ ಹೆಸರೂ ಚಾರ್ಜ್‌ಶೀಟ್‌ನಲ್ಲಿ:

ಬೆಳಗಾವಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಯಡಿಯೂರಪ್ಪ ಅವರು, ರಾಜ್ಯ ಸರ್ಕಾರದಲ್ಲಿ ‘್ರಷ್ಟಾಚಾರ ತಾಂಡವವಾಡುತ್ತಿದ್ದು ಈ ಕುರಿತು ದಾಖಲೆ ಸಂಗ್ರಹಿಸಲಾಗುತ್ತಿದೆ ಎಂದಿದ್ದಾರೆ.

ಸಿದ್ದರಾಮಯ್ಯ, ಅವರ ಸಂಬಂಧಿಗಳು ಹಾಗೂ ಮೂರ್ನಾಲ್ಕು ಜನ ಸಚಿವರ, ಶಾಸಕರ ಮತ್ತು ಗೃಹ ಇಲಾಖೆ ಸಲಹೆಗಾರ ಕೆಂಪಯ್ಯ ಅವರ ‘ಭ್ರಷ್ಟಾಚಾರಗಳ ಕುರಿತು ಚಾರ್ಜ್‌ಶೀಟ್‌'ನಲ್ಲಿರಲಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲೂ ಹಗಲು ದರೋಡೆ ನಡೆಯುತ್ತಿದೆ. ಈ ಎಲ್ಲದರ ಬಗ್ಗೆ ದಾಖಲೆ ಸಂಗ್ರಹಿಸಲಾಗುತ್ತಿದ್ದು ಚಾರ್ಜ್‌ ಶೀಟ್ ಬಿಡುಗಡೆ ಮಾಡಲಾಗುವುದು. ಜೊತೆಗೆ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ಪ್ರತಿಭಟನೆಯನ್ನೂ ನಡೆಸಲಿದೆ ಎಂದು ಹೇಳಿದ್ದಾರೆ.

ಎಂ.ಬಿ.ಪಾಟೀಲ್ ವಿರುದ್ಧ ಕಿಡಿ:

ವಿಜಯಪುರದಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಬಿಎಸ್‌ವೈ, ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್ ನೀರಾವರಿ ಯೋಜನೆಯಲ್ಲಿ ಸಾಕಷ್ಟು ಅವ್ಯವಹಾರ ಮಾಡಿದ್ದು, ರಾಜ್ಯದ ಖಜಾ ನೆಯನ್ನು ಲೂಟಿ ಮಾಡಿದ್ದಾರೆ. ಅವರ ಭ್ರಷ್ಟಾಚಾರವನ್ನು ಶೀಘ್ರದಲ್ಲಿಯೇ ದಾಖಲೆ ಸಮೇತ ಬಯಲಿಗೆಳೆಯುತ್ತೇನೆ ಎಂದಿದ್ದಾರೆ.

ಪಾಟೀಲ್ ಅವರು ರಾಜ್ಯದ ಖಜಾನೆಯನ್ನು ಹಗಲು ದರೋಡೆ ಮಾಡಿದ್ದಾರೆ. ಈ ಹಿಂದೆ ತಾವು ಉಪಮುಖ್ಯಮಂತ್ರಿಯಾದ ಸಂದ‘ರ್ದಲ್ಲಿಯೇ ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಸಂಬಂಧಿಸಿದಂತೆ ಪುನರ್ವಸತಿ ಹಾಗೂ ಪುನರ್‌ನಿರ್ಮಾಣ ಕಾರ್ಯಕ್ಕೆ 17,802 ಕೋಟಿ ವಿಶೇಷ ಪ್ಯಾಕೇಜ್ ನೀಡಲಾಗಿತ್ತು. ಆದರೆ ಸಚಿವ ಎಂ.ಬಿ.ಪಾಟೀಲ್ ಅವರು ಪುನರ್ವಸತಿ ಹಾಗೂ ಪುನರ್ ನಿರ್ಮಾಣದ ಮಾತೆತ್ತು ತ್ತಿಲ್ಲ. ಅವರ ರಾಜೀನಾಮೆಗೆ ಒತ್ತಾಯಿಸಿ ಅ.23ರಂದು ವಿಜಯಪುರದಲ್ಲಿ ಪ್ರತಿಭಟನೆ ನಡೆಸುವುದಾಗಿ ತಿಳಿಸಿದ್ದಾರೆ