ಸಿಬಿಐ ವಿಶೇಷ ನ್ಯಾಯಾಲಯದ ಮಹತ್ವದ ತೀರ್ಪು ಹೊರ ಬಂದ ಕೆಲವೇ ಕ್ಷಣಗಳಲ್ಲಿ ತಮ್ಮ ಸಂಭ್ರಮವನ್ನು ಸಾಮಾಜಿಕ ಜಾಲತಾಣವಾದ ಟ್ವೀಟರ್ ನಲ್ಲಿ ವ್ಯಕ್ತಪಡಿಸಿದ್ದು, 'ಸತ್ಯ ಮೇವ ಜಯತೆ' ಎಂದು ಟ್ವೀಟ್ ಮಾಡಿದ್ದಾರೆ.
ಬೆಂಗಳೂರು(ಅ.26): ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಪ್ರೇರಣಾ ಪರೀಕ್ಷೆಯಲ್ಲಿ ಪಾಸಾಗಿದ್ದು, ಪ್ರೇರಣಾ ಟ್ರಸ್ಟ್ ಮೂಲಕ ಕಿಕ್ ಬ್ಯಾಗ್ ಪ್ರಕರಣದಲ್ಲಿ ಖುಲಾಸೆಗೊಂಡಿದ್ದಾರೆ. ತೀರ್ಪು ಬಂದ ನಿಮಿಷಗಳಲ್ಲೇ ಟ್ವೀಟ್ ಮಾಡಿದ ಬಿ.ಎಸ್.ವೈ 'ಸತ್ಯ ಮೇವ ಜಯತೆ' ಎಂದಿದ್ದಾರೆ.
ಸಿಬಿಐ ವಿಶೇಷ ನ್ಯಾಯಾಲಯದ ಮಹತ್ವದ ತೀರ್ಪು ಹೊರ ಬಂದ ಕೆಲವೇ ಕ್ಷಣಗಳಲ್ಲಿ ತಮ್ಮ ಸಂಭ್ರಮವನ್ನು ಸಾಮಾಜಿಕ ಜಾಲತಾಣವಾದ ಟ್ವೀಟರ್ ನಲ್ಲಿ ವ್ಯಕ್ತಪಡಿಸಿದ್ದು, 'ಸತ್ಯ ಮೇವ ಜಯತೆ' ಎಂದು ಟ್ವೀಟ್ ಮಾಡಿದ್ದಾರೆ.
ಪ್ರೇರಣಾ ಕಿಕ್ ಬ್ಯಾಕ್ ಕೇಸ್ನಲ್ಲಿ ರಿಲೀಫ್ ಆಗುತ್ತಿದ್ದಂತೆ ಮಾಧ್ಯಮಗಳಿಗೂ ಪ್ರತಿಕ್ರಿಯೇ ನೀಡುವ ಮೊದಲೇ ಟ್ವೀಟರ್ ಮೂಲಕ ಅಭಿಮಾನಿಗಳನ್ನು ತಲುಪುವ ಪ್ರಯತ್ನ ಮಾಡಿದ ಬಿಎಸ್'ವೈ 'ನ್ಯಾಯ ಸಿಕ್ಕಿದೆ, ಎಲ್ಲ ಅಭಿಮಾನಿಗಳಿಗೂ ಧನ್ಯವಾದ, ಸಂಕಷ್ಟ ಕಾಲದಲ್ಲಿ ಜೊತೆಗಿದ್ದವರಿಗೆ ಕೃತಜ್ಞತೆಗಳು' ಎಂದಿದ್ದಾರೆ.