ಬೆಂಗಳೂರು, [ಆ.01]:  ಹಿಂದಿನ ಮೈತ್ರಿ ಸರ್ಕಾರದಲ್ಲಿ ದಾಖಲಾಗಿದ್ದ ಹಿಂದು ಕಾರ್ಯಕರ್ತರ ಮೇಲಿನ ಮೊಕದ್ದಮೆಗಳನ್ನು ಯಡಿಯೂರಪ್ಪ ಸರ್ಕಾರ ವಾಪಸ್ ಪಡೆದಿದೆ. 

ಟಿಪ್ಪು ಜಯಂತಿ ಆಚರಣೆ ರದ್ದುಗೊಳಿಸಿದ ಬೆನ್ನಲ್ಲೇ ಮೈತ್ರಿ ಸರ್ಕಾರದ ಅವಧಿಯಲ್ಲಿ ಹಿಂದೂ ಕಾರ್ಯಕರ್ತರ ವಿರುದ್ಧ ದಾಖಲಾಗಿದ್ದ ಒಟ್ಟು 2000 ಕೇಸ್ ಗಳನ್ನು ಹಿಂಪಡೆದು ರಾಜ್ಯ ಸರ್ಕಾರ ಇಂದು [ಗುರುವಾರ] ಆದೇಶ ಹೊರಡಿಸಿದೆ.

ಟಿಪ್ಪು ಸುಲ್ತಾನ್ ಜಯಂತಿ ಆಚರಣೆಗೆ ರಾಜ್ಯ ಸರಕಾರ ಎಳ್ಳು ನೀರು
  
ಈ ಬಗ್ಗೆ ಶಾಸಕರಾದ ಕೆ.ಜಿ.ಬೋಪಯ್ಯ ಹಾಗೂ ರೂಪಾಲಿ ನಾಯ್ಕ ಅವರು ಈ ಹಿಂದೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಮನವಿ ಪತ್ರ ಸಲ್ಲಿಸಿದ್ದರು. ಈ ಮನವಿಯ ಆಧಾರದ ಮೇಲೆ ರಾಜ್ಯ ಸರ್ಕಾರ ಈ ಕ್ರಮ ಕೈಗೊಂಡಿದೆ.

ಮಂಗಳೂರು, ಕೊಡಗು ಸೇರಿದಂತೆ ರಾಜ್ಯದ ಹಲವೆಡೆ ಹಿಂದೂ ಯುವಕರ ಮೇಲೆ ದಾಖಲಾಗಿದ್ದ ಪ್ರಕರಣಗಳನ್ನು ವಾಪಸ್ ಪಡೆಯಲಾಗಿದೆ.