ಶಾಲೆಗಳಲ್ಲಿ ಯೋಗ ಕಡ್ಡಾಯ ಮಾಡಬೇಕು ಎಂದು ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮಂಗಳವಾರ ವಜಾ ಮಾಡಿರುವ ಸುಪ್ರೀಂ ಕೋರ್ಟ್, ಶಿಕ್ಷಣ ಸಂಸ್ಥೆಗಳು ಏನನ್ನು ಕಲಿಸಬೇಕು ಎಂದು ನಾವು ನಿರ್ಧರಿಸುವುದಿಲ್ಲವೆಂದು ಹೇಳಿದೆ.
ನವದೆಹಲಿ: ಶಾಲೆಗಳಲ್ಲಿ ಯೋಗ ಕಡ್ಡಾಯ ಮಾಡಬೇಕು ಎಂದು ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮಂಗಳವಾರ ವಜಾ ಮಾಡಿರುವ ಸುಪ್ರೀಂ ಕೋರ್ಟ್, ಶಿಕ್ಷಣ ಸಂಸ್ಥೆಗಳು ಏನನ್ನು ಕಲಿಸಬೇಕು ಎಂದು ನಾವು ನಿರ್ಧರಿಸುವುದಿಲ್ಲವೆಂದು ಹೇಳಿದೆ.
ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆಯಡಿಯಲ್ಲಿ ಯೋಗವು ಮಗುವಿನ ಮೂಲಭೂತ ಹಕ್ಕಲ್ಲವೆಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ.
ರಾಷ್ಟ್ರೀಯ ಯೋಗ ಕಾರ್ಯನೀತಿ ರೂಪಿಸಬೇಕು ಹಾಗೂ 1 ರಿಂದ 8ನೇ ತರಗತಿವರೆಗೆ ಯೋಗವನ್ನು ಕಡ್ಡಾಯಗೊಳಿಸಬೇಕೆಂದು ಕೋರಿ ದೆಹಲಿ ವಕೀಲ ಜೆ.ಸಿ. ಸೇಠ್ ಹಾಗೂ ದೆಹಲಿ ಬಿಜೆಪಿ ವಕ್ತಾರ ಅಶ್ವಿನಿ ಕುಮಾರ್ ಉಪಾಧ್ಯಾಯ ಸುಪ್ರೀಂ’ನಲ್ಲಿ ಅರ್ಜಿ ಸಲ್ಲಿಸಿದ್ದರು.
ಯೋಗವು ಆರೋಗ್ಯ ಹಾಗೂ ದೈಹಿಕ ಶಿಕ್ಷಣದ ಭಾಗವಾಗಿದೆ, ಅದು 1 ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಕಡ್ಡಾಯವಾಗಿದೆ ಎಂದು ಅರ್ಜಿದಾರರು ವಾದಿಸಿದ್ದರು.
