ಕಾಂಗ್ರೆಸ್‌ನಿಂದ ದೂರವಾಗುತ್ತಿದ್ದಾರೆ ಎನ್ನಲಾಗುತ್ತಿರುವ ಶಾಸಕ ಸಿ.ಪಿ. ಯೋಗೇಶ್ವರ್ ಅವರು ಮುಂದಿನ ರಾಜಕೀಯ ನಡೆ ಕುರಿತು ಅ.14ರಂದು ನಿರ್ಧಾರ ಪ್ರಕಟಿಸುವುದಾಗಿ ತಿಳಿಸಿದ್ದಾರೆ.
ಚನ್ನಪಟ್ಟಣ: ಕಾಂಗ್ರೆಸ್ನಿಂದ ದೂರವಾಗುತ್ತಿದ್ದಾರೆ ಎನ್ನಲಾಗುತ್ತಿರುವ ಶಾಸಕ ಸಿ.ಪಿ. ಯೋಗೇಶ್ವರ್ ಅವರು ಮುಂದಿನ ರಾಜಕೀಯ ನಡೆ ಕುರಿತು ಅ.14ರಂದು ನಿರ್ಧಾರ ಪ್ರಕಟಿಸುವುದಾಗಿ ತಿಳಿಸಿದ್ದಾರೆ.
‘ಅ.14ರಂದು ಸುದ್ದಿಗೋಷ್ಠಿ ಕರೆದಿದ್ದೇನೆ. ಅಲ್ಲಿ ಎಲ್ಲವನ್ನೂ ಬಹಿರಂಗಪಡಿಸುತ್ತೇನೆ. ಅಲ್ಲಿವರೆಗೆ ಈ ಸಂಬಂಧ ನಾನು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ’ ಎಂದು ಹೇಳಿದ್ದಾರೆ.
ಯೋಗೇಶ್ವರ್ ಬಿಜೆಪಿ ಸೇರಲಿದ್ದಾರೆ ಎನ್ನುವ ಗುಸುಗುಸು ಈಗಾಗಲೇ ಕ್ಷೇತ್ರದಲ್ಲಿ ಕೇಳಿ ಬಂದಿದೆ. ಈ ಸಂಬಂಧ ಅವರು ರಾಜ್ಯ ಬಿಜೆಪಿ ಉಸ್ತುವಾರಿ ಮುರುಳೀಧರ್ ರಾವ್ ಜತೆಗೆ ಒಂದು ಸುತ್ತಿನ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.
