ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಹೊಸ ದಾಖಲೆಯೊಂದನ್ನು ಬರೆದಿದ್ದಾರೆ. ಅಧಿಕಾರ ವಹಿಸಿಕೊಂಡ 16 ತಿಂಗಳಲ್ಲೇ ಅವರು ರಾಜ್ಯದ  75 ಜಿಲ್ಲೆಗಳಿಗೆ ಭೇಟಿ ನೀಡಿದ್ದಾರೆ.  

ಲಖ್ನೋ : ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಇದೀಗ ದಾಖಲೆಯೊಂದನ್ನು ಬರೆದಿದ್ದಾರೆ. ಇದುವರೆಗೂ ಉತ್ತರ ಪ್ರದೇಶದಲ್ಲಿ ಯಾವ ಮುಖ್ಯಮಂತ್ರಿಗಳೂ ಮಾಡದ ಈ ದಾಖಲೆ ಯೋಗಿ ಆದಿತ್ಯನಾಥ್ ಅವರಿಂದ ಆಗಿದೆ. 

ತಾವು ಅಧಿಕಾರ ವಹಿಸಿಕೊಂಡ 16 ತಿಂಗಳಲ್ಲಿ ರಾಜ್ಯದ 75 ಜಿಲ್ಲೆಗಳಿಗೆ ಭೇಟಿ ನೀಡಿದ್ದಾರೆ. ಕಳೆದ ವರ್ಷ ಮಾರ್ಚ್ ತಿಂಗಳ 19ನೇ ತಾರೀಕು ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಅಧಿಕಾರಿ ವಹಿಸಿಕೊಂಡಿದ್ದರು. 

ವಿವಿಧ ಜಿಲ್ಲೆಗಳಲ್ಲಿ ವಿವಿಧ ರೀತಿಯ ಅಭಿವೃದ್ಧಿ ಯೋಜನೆಗಳನ್ನು ಆರಂಭ ಮಾಡುವ ಸಲುವಾಗಿ, ಪ್ರತಿಯೊಬ್ಬರಿಗೂ ಅನುಕೂಲಕರವಾಗುವ ಯೋಜನೆಗಳನ್ನು ತಲುಪಿಸುವ ಸಲುವಾಗಿ ಪ್ರತೀ ಜಿಲ್ಲೆಗಳಿಗೆ ಭೇಟಿ ನೀಡಿದ್ದಾರೆ. 

ಭಾನುವಾರ ಇತಾಹ್ ಜಿಲ್ಲೆಗೆ ಭೇಟಿ ನೀಡಿದ ಅವರು 253 ಕೋಟಿ ವೆಚ್ಚದ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿದ್ದಾರೆ. ಇದೇ ರೀತಿ ಪ್ರತೀ ಜಿಲ್ಲೆಗೆ ಭೇಟಿ ನೀಡುವ ಮೂಲಕ ಅವರು ದಾಖಲೆ ಬರೆದಿದ್ದಾರೆ.