ದುರ್ನಡತೆಯ ಸಿಬ್ಬಂದಿಯನ್ನು ಗುರುತಿಸಿ ಅವರ ವಿರುದ್ಧ ಕ್ರಮ ಕೈಗೊಳ್ಳಲು ಡಿಜಿಪಿಯವರು ನೀಡಿದ್ದ ಆದೇಶದ ಮೇರೆಗೆ, 100ಕ್ಕೂ ಅಧಿಕ ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ.

ಲಖನೌ(ಮಾ.23): ಉತ್ತರ ಪ್ರದೇಶದಲ್ಲಿ ಕಾನೂನು ಸುವ್ಯವಸ್ಥೆ ಜಾರಿಗೊಳಿಸುವಲ್ಲಿ ವಿಫಲರಾಗುವ ಪೊಲೀಸ್ ಸಿಬ್ಬಂದಿ ವಿರುದ್ಧ ಕಠಿಣ ಕ್ರಮಕೈಗೊಳ್ಳಲಾಗುವುದು ಎಂಬ ಸಂದೇಶ ರವಾನಿಸಲಾಗಿದೆ.

ಅಲ್ಲಿನ ಸಿಎಂ ಯೋಗಿ ಆದಿತ್ಯನಾಥ್‌'ರ ನೂತನ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ 100ಕ್ಕೂ ಅಧಿಕ ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಿ, ಕರ್ತವ್ಯ ಲೋಪ ಎಸಗುವ ಸಿಬ್ಬಂದಿಗೆ ಎಚ್ಚರಿಕೆ ನೀಡಲಾಗಿದೆ.

ಗಾಜಿಯಾಬಾದ್, ಮೇರಠ್ ಮತ್ತು ನೋಯ್ಡಾದಲ್ಲಿ ಅತ್ಯಧಿಕ ಅಮಾನತುಗಳು ನಡೆದಿವೆ. ಲಖನೌನಲ್ಲಿ ಏಳು ಪೊಲೀಸ್ ಇನ್ಸ್‌ಪೆಕ್ಟರ್‌ಗಳನ್ನು ಅಮಾನತುಗೊಳಿಸಲಾಗಿದೆ.

ದುರ್ನಡತೆಯ ಸಿಬ್ಬಂದಿಯನ್ನು ಗುರುತಿಸಿ ಅವರ ವಿರುದ್ಧ ಕ್ರಮ ಕೈಗೊಳ್ಳಲು ಡಿಜಿಪಿಯವರು ನೀಡಿದ್ದ ಆದೇಶದ ಮೇರೆಗೆ, 100ಕ್ಕೂ ಅಧಿಕ ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ.