ಚಲಿಸುತ್ತಿರುವ ರೈಲಿನಲ್ಲಿ ಮಹಿಳೆಯೊಬ್ಬಳಿಗೆ ಇಬ್ಬರು ವ್ಯಕ್ತಿಗಳು ಆ್ಯಸಿಡ್ ಕುಡಿಯುವಂತೆ ಒತ್ತಾಯಿಸಿ ಅತ್ಯಾಚಾರವೆಸಗಿದ್ದು, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆಸ್ಪತ್ರೆಗೆ ಭೇಟಿ ನೀಡಿ ಸಂತ್ರಸ್ಥೆಯ ಆರೋಗ್ಯ ಸ್ಥಿತಿ ಬಗ್ಗೆ ವಿಚಾರಿಸಿದರು. ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸಿ ಕಠಿಣ ಕ್ರಮ ಕೈಗೊಳ್ಳಿ ಎಂದು ಮುಖ್ಯಮಂತ್ರಿಯವರು ಪೊಲೀಸರಿಗೆ ಸೂಚಿಸಿದ್ದಾರೆ. ಸಂತ್ರಸ್ಥೆಗೆ ವೈದ್ಯಕೀಯ ಚಿಕಿತ್ಸೆಗಾಗಿ 1 ಲಕ್ಷ ರೂ. ನೀಡುವುದಾಗಿ ಘೋಷಿಸಿದ್ದಾರೆ.

ನವದೆಹಲಿ (ಮಾ.24): ಚಲಿಸುತ್ತಿರುವ ರೈಲಿನಲ್ಲಿ ಮಹಿಳೆಯೊಬ್ಬಳಿಗೆ ಇಬ್ಬರು ವ್ಯಕ್ತಿಗಳು ಆ್ಯಸಿಡ್ ಕುಡಿಯುವಂತೆ ಒತ್ತಾಯಿಸಿ ಅತ್ಯಾಚಾರವೆಸಗಿದ್ದು, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆಸ್ಪತ್ರೆಗೆ ಭೇಟಿ ನೀಡಿ ಸಂತ್ರಸ್ಥೆಯ ಆರೋಗ್ಯ ಸ್ಥಿತಿ ಬಗ್ಗೆ ವಿಚಾರಿಸಿದರು. ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸಿ ಕಠಿಣ ಕ್ರಮ ಕೈಗೊಳ್ಳಿ ಎಂದು ಮುಖ್ಯಮಂತ್ರಿಯವರು ಪೊಲೀಸರಿಗೆ ಸೂಚಿಸಿದ್ದಾರೆ. ಸಂತ್ರಸ್ಥೆಗೆ ವೈದ್ಯಕೀಯ ಚಿಕಿತ್ಸೆಗಾಗಿ 1 ಲಕ್ಷ ರೂ. ನೀಡುವುದಾಗಿ ಘೋಷಿಸಿದ್ದಾರೆ.

ಚಾರ್ಬಾಗ್ ಸ್ಟೇಷನ್ ನಲ್ಲಿ ಮಹಿಳೆಯೊಬ್ಬರು ಅಲಹಾಬಾದ್-ಲ್ನೋ ಗಂಗಾ ಗೋಮತಿ ಎಕ್ಸ್ಪ್ರೆಸ್ ರೈಲು ಹತ್ತಿದ್ದರು. ಆಗ ಇಬ್ಬರು ವ್ಯಕ್ತಿಗಳು ಆಕೆಗೆ ಆ್ಯಸಿಡ್ ಕುಡಿಯುವಂತೆ ಒತ್ತಾಯಿಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.