ಮಸ್ಕಿ[ಜು.15]: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಪ್ರತಾಪಗೌಡ ಪಾಟೀಲ್‌ ನಿವಾಸಕ್ಕೆ ಮುತ್ತಿಗೆ ಹಾಕಲು ಬಂದಿದ್ದ ಯುವ ಕಾಂಗ್ರೆಸ್‌ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ ಘಟನೆ ಭಾನುವಾರ ರಾಯಚೂರು ಜಿಲ್ಲೆ ಮಸ್ಕಿ ತಾಲೂಕಿನಲ್ಲಿ ನಡೆದಿದೆ.

ಬಿಜೆಪಿಗೆ ಹೋಗ್ತಾರ ಈ ಅತೃಪ್ತ ಕೈ ನಾಯಕ

ಸಿಂಧನೂರು ತಾಲೂಕು ಯೂತ್‌ ಕಾಂಗ್ರೆಸ್‌ ಅಧ್ಯಕ್ಷ ಖಾಜಾ ಹುಸೇನ್‌ ರೌಡಕುಂದಾ ನೇತೃತ್ವದಲ್ಲಿ ಸುಮಾರು ಹತ್ತು ಕ್ರೂಸರ್‌ ವಾಹನಗಳಲ್ಲಿ ಆಗಮಿಸಿದ ಯುತ್‌ ಕಾಂಗ್ರೆಸ್‌ ಕಾರ್ಯಕರ್ತರು ಪಟ್ಟಣದ ಕಿಲ್ಲಾದಲ್ಲಿರುವ ಶಾಸಕ ಪ್ರತಾಪಗೌಡ ಪಾಟೀಲ್‌ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು.

ಕರ್ನಾಟಕ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲ: ಎಲ್ಲಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ

ಆದರೆ, ಪೊಲೀಸರು ಮುಂಜಾಗ್ರತಾ ಕ್ರಮವಾಗಿ ಮಾರ್ಗ ಮಧ್ಯದ ವಾಲ್ಮೀಕಿ ಭವನದ ಹತ್ತಿರ ಬ್ಯಾರಿಕೇಡ್‌ ಹಾಕಿ ತಡೆದರು.