ಕಳ್ಳಭಟ್ಟಿ ಅಡ್ಡೆ ಮೇಲೆ ದಾಳಿ ಮಾಡಲು ಖಾಕಿ ಪಡೆ ಆಗಮಿಸಿತ್ತು. ಇದನ್ನು ತಿಳಿದ ಯುವಕ ಸ್ಥಳದಿಂದ ಪರಾರಿಯಾಗಲು ಯತ್ನಿಸಿದ್ದು, ಈ ಸಂದರ್ಭದಲ್ಲಿ ಅವಘಡ ಸಂಭವಿಸಿದೆ.

ಬೆಳಗಾವಿ(ಡಿ.2): ಬೆಳಗಾವಿಯಲ್ಲಿ ಅಬಕಾರಿ ಇಲಾಖೆ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ಯುವಕನೋರ್ವ ಬಾವಿಗೆ ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದೆ.

ಕಳ್ಳಭಟ್ಟಿ ಅಡ್ಡೆ ಮೇಲೆ ದಾಳಿ ಮಾಡಲು ಖಾಕಿ ಪಡೆ ಆಗಮಿಸಿತ್ತು. ಇದನ್ನು ತಿಳಿದ ಯುವಕ ಸ್ಥಳದಿಂದ ಪರಾರಿಯಾಗಲು ಯತ್ನಿಸಿದ್ದು, ಈ ಸಂದರ್ಭದಲ್ಲಿ ಅವಘಡ ಸಂಭವಿಸಿದೆ.

ಇದರಿಂದ ರೊಚ್ಚಿಗೆದ್ದ ಗ್ರಾಮಸ್ಥರು ಮತ್ತು ಯುವಕನ ಕುಟುಂಬಸ್ಥರು ಅಬಕಾರಿ ಇಲಾಖೆ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಕಲ್ಲುಗಳನ್ನು ಕೈಗೆತ್ತಿಕೊಂಡು ಪೊಲೀಸರೊಂದಿಗೆ ವಾಗ್ವಾದಕ್ಕೆ ಇಳಿದಿದ್ದಾರೆ. ಅಲ್ಲದೇ ಪೊಲೀಸರ ಮೇಲೆ ಕಲ್ಲು ತೂರಾಟಕ್ಕೂ ಮುಂದಾಗಿದ್ದಾರೆ. ಈ ವೇಳೆ ಇವರನ್ನು ತಡೆಯಲು ಪೊಲೀಸರು ಹರಸಾಹಸ ಪಟ್ಟಿದ್ದು, ಯುವಕ ಸಾವನ್ನಪ್ಪಿದ ವಿಚಾರವಾಗಿ ಗ್ರಾಮಸ್ಥರು ಹಾಗೂ ಪೊಲೀಸರ ನಡುವೆ ತೀವ್ರ ಮಾತಿನ ಚಕಮಕಿ ನಡೆದಿದೆ.