ಈತ ತಮ್ಮತಂದೆಯ ಜೊತೆಯಿರದೆ ತಾಯಿಯ ಜೊತೆ ಪ್ರತ್ಯೇಕವಾಗಿ ವಾಸಿಸುತ್ತಿದ್ದ.ಪ್ರತ್ಯಕ್ಷದರ್ಶಿಗಳ ಪ್ರಕಾರ ಬೈಕ್'ನಲ್ಲಿ ಹೋಗುತ್ತಿದ್ದಾಗ ಹಿಂದಿನಿಂದ ಆಗಮಿಸಿದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ.

ಬಾಗಲಕೋಟೆ(ಸೆ.30): ಸ್ವಾಮೀಜಿಯೊಬ್ಬರ ಪುತ್ರ ಬರ್ಬರವಾಗಿ ಕೊಲೆಯಾದ ಘಟನೆ ಜಿಲ್ಲೆಯ ಜಮಖಂಡಿ ತಾಲೂಕಿನ ಬಂಡಿಗಣಿ ಗ್ರಾಮದಲ್ಲಿ ನಡೆದಿದೆ.

ಬಂಡಿಗಣಿ ಮಠದ ದಾನಯ್ಯ ಸ್ವಾಮೀಜಿಯ ಪುತ್ರ ಚಿಕ್ಕಯ್ಯ (32) ಕೊಲೆಯಾದವ. ಈತ ತಮ್ಮತಂದೆಯ ಜೊತೆಯಿರದೆ ತಾಯಿಯ ಜೊತೆ ಪ್ರತ್ಯೇಕವಾಗಿ ವಾಸಿಸುತ್ತಿದ್ದ.ಪ್ರತ್ಯಕ್ಷದರ್ಶಿಗಳ ಪ್ರಕಾರ ಬೈಕ್'ನಲ್ಲಿ ಹೋಗುತ್ತಿದ್ದಾಗ ಹಿಂದಿನಿಂದ ಆಗಮಿಸಿದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ. ತೀರ್ವವಾಗಿ ಗಾಯಗೊಂಡ ಈತ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಮೃತನು ರಿಯಲ್ ಎಸ್ಟೇಟ್ ಜೊತೆ ಯುವಕ ಸಂಘಗಳನ್ನು ಕಟ್ಟಿಕೊಂಡಿದ್ದ.

2 ವರ್ಷದ ಹಿಂದೆ ಚಿಕ್ಕಯ್ಯನ ಮೇಲೆ ಹಲ್ಲೆ ಕೂಡ ನಡೆದಿತ್ತು. ಆಗಾಗ ಬೆದರಿಕೆ ಕರೆಗಳು ಬರುತ್ತಿದ್ದವು ಎನ್ನಲಾಗಿದೆ. ಎಸ್ಪಿ ರಿಷ್ಯಂತ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಬನಹಟ್ಟಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.