ಇನ್ನು ಮುಂದೆ ಸೆಲೆಬ್ರಿಟಿಗಳು ಅಭಿಮಾನಿಗಳೊಂದಿಗೆ ಸೆಲ್ಫಿ ತೆಗೆದುಕೊಳ್ಳಬೇಕಾದರೆ ಹಿಂದೆ ಮುಂದೆ ನೋಡಬೇಕಾದ ಸ್ಥಿತಿ ನಿರ್ಮಾಣವಾಗಿದೆ. ಸೆಲ್ಫಿ ತೆಗೆದುಕೊಳ್ಳುವ ನೆಪದಲ್ಲಿ ಬಂದ ಯುವಕ ವೈಎಸ್ ಜಗನ್ ಮೋಹನ್ ರೆಡ್ಡಿ ಅವರಿಗೆ ಚಾಕುವಿನಿಂದ ಇರಿದಿದ್ದಾನೆ.

ವಿಶಾಖಪಟ್ಟಣ(ಅ.25) ವೈಎಸ್ ಆರ್ ಕಾಂಗ್ರೆಸ್ ಅಧ್ಯಕ್ಷ ವೈಎಸ್ ಜಗನ್ ಮೋಹನ್ ರೆಡ್ಡಿ ಮೇಲೆ ದುಷ್ಕರ್ಮಿಯೊಬ್ಬ ದಾಳಿ ಮಾಡಿದ್ದಾನೆ. ವಿಶಾಖಪಟ್ಟಣದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿಯೇ ವ್ಯಕ್ತಿಯೊಬ್ಬ ಚಾಕುವಿನಿಂದ ಇರಿದಿದ್ದು ಜಗನ್ ಎಡ ಭಾಗದ ತೋಳಿಗೆ ಗಾಯವಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಸೆಲ್ಫಿ ತೆಗೆದುಕೊಳ್ಳುವ ನೆಪದಲ್ಲಿ ಬಂದ ಯುವಕ ಜಗನ್ ಜೊತೆ ಮಾತನಾಡಿ, ಒಂದು ವೇಳೆ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ 168 ಸೀಟು ಗೆದ್ದರೆ ಏನು ಮಾಡುತ್ತೀರಿ ಎಂದು ಕೇಳಿದ್ದಾನೆ, ನಂತರ ಸೆಲ್ಫಿ ತೆಗೆದುಕೊಂಡ ಬಳಿಕ ಚಾಕುವಿನಿಂದ ಜಗನ್​ ಅವರ ಎಡ ಭಾಗದ ತೋಳಿಗೆ ಇರಿದಿದ್ದಾನೆ.

ಜಗನ್​ ಜತೆಗೇ ಇದ್ದ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ವಿಮಾನ ನಿಲ್ದಾಣದೊಳಗೆ ಬಿಗಿ ಭದ್ರತೆ ಇರುತ್ತದೆ. ಹೀಗಿರುವಾಗ ಚಾಕು ಹೇಗೆ ತೆಗೆದುಕೊಂಡು ಬಂದಿದ್ದ ಎಂಬ ಪ್ರಶ್ನೆ ಕಾಡುತ್ತಿದ್ದು ಭದ್ರತಾ ವ್ಯವಸ್ಥೆ ಮೇಲೆ ಅನುಮಾನ ವ್ಯಕ್ತಪಡಿಸಲಾಗಿದೆ.