ಆಹಾರ, ನಾಗರಿಕ ಸರಬರಾಜು ಹಾಗೂ ಅಲ್ಪಸಂಖ್ಯಾತ ಮತ್ತು ಹಜ್‌ ಸಚಿವ ಜಮೀರ್‌ ಅಹ್ಮದ್‌ ಖಾನ್‌ ಅವರು ಕಾಂಗ್ರೆಸ್‌ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ರಾಜಕೀಯ ಕಾರ್ಯದರ್ಶಿ ಅಹ್ಮದ್‌ ಪಟೇಲ್ ಅವರನ್ನು ಭಾನುವಾರ ಭೇಟಿಯಾದರು.  

ನವದೆಹಲಿ : ಆಹಾರ, ನಾಗರಿಕ ಸರಬರಾಜು ಹಾಗೂ ಅಲ್ಪಸಂಖ್ಯಾತ ಮತ್ತು ಹಜ್‌ ಸಚಿವ ಜಮೀರ್‌ ಅಹ್ಮದ್‌ ಖಾನ್‌ ಅವರು ಕಾಂಗ್ರೆಸ್‌ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ರಾಜಕೀಯ ಕಾರ್ಯದರ್ಶಿ ಅಹ್ಮದ್‌ ಪಟೇಲ್ ಅವರನ್ನು ಭಾನುವಾರ ಭೇಟಿಯಾದರು. 

ಪಟೇಲ್ ಅವರನ್ನು ನವದೆಹಲಿಯ ಅವರ ನಿವಾಸದಲ್ಲಿ ಭೇಟಿಯಾದ ಜಮೀರ್‌, ಕಾಂಗ್ರೆಸ್‌ ಪಕ್ಷದಿಂದ ತಮಗೆ ಸಚಿವರನ್ನಾಗಿಸಲು ಅವಕಾಶ ಮಾಡಿಕೊಟ್ಟದ್ದಕ್ಕಾಗಿ ಕೃತಜ್ಞತೆ ಸಲ್ಲಿಸಿದರು. 

ಹಾಗೆಯೇ ಅಹ್ಮದ್‌ ಪಟೇಲ್‌ ಅವರು ಜಮೀರ್‌ ಅವರಿಂದ ರಾಜ್ಯದ ಪ್ರಸ್ತುತ ರಾಜಕೀಯ ವಿದ್ಯಮಾನಗಳ ಬಗ್ಗೆ ಮಾಹಿತಿ ಪಡೆದಿದ್ದಾರೆ.