Asianet Suvarna News Asianet Suvarna News

ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಜಯಭೇರಿ

ರಾಜ್ಯದಲ್ಲಿ ವಿಧಾನಸಭಾ ಕ್ಷೇತ್ರಗಳಿಗೆ ನಡೆದಿರುವ ಎರಡು ಉಪಚುನಾವಣೆಗಳಲ್ಲಿ ಗೆಲುವ ಸಾಧಿಸಿರುವ ಕಾಂಗ್ರೆಸ್ ಪಕ್ಷ ಇದೀಗ ಬಾಗಲಕೋಟೆ ಮತ್ತು ರಾಯಚೂರು ಜಿಲ್ಲಾ ಪಂಚಾಯಿತಿಗಳಲ್ಲಿ ಉಪಚುನಾವಣೆ ನಡೆದ ಎರಡೂ ಸ್ಥಾನಗಳನ್ನು
ಗೆದ್ದುಕೊಂಡಿದೆ. 

ZP By Election : Congress Victory

ಬಾಗಲಕೋಟೆ/ರಾಯಚೂರು: ರಾಜ್ಯದಲ್ಲಿ ವಿಧಾನಸಭಾ ಕ್ಷೇತ್ರಗಳಿಗೆ ನಡೆದಿರುವ ಎರಡು ಉಪಚುನಾವಣೆಗಳಲ್ಲಿ ಗೆಲುವ ಸಾಧಿಸಿರುವ ಕಾಂಗ್ರೆಸ್ ಪಕ್ಷ ಇದೀಗ ಬಾಗಲಕೋಟೆ ಮತ್ತು ರಾಯಚೂರು ಜಿಲ್ಲಾ ಪಂಚಾಯಿತಿಗಳಲ್ಲಿ ಉಪ ಚುನಾವಣೆ ನಡೆದ ಎರಡೂ ಸ್ಥಾನಗಳನ್ನು ಗೆದ್ದುಕೊಂಡಿದೆ. ಇದೇವೇಳೆ ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ 5 ಗ್ರಾಮ ಪಂಚಾ ಯಿತಿಗಳಿಗೆ ನಡೆದ ಸಾರ್ವತ್ರಿಕ ಚುನಾವಣೆ ಯಲ್ಲಿ ಎರಡು ಕಡೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಗೆದ್ದಿದ್ದು, ಎರಡು ಕಡೆ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು  ಹೆಚ್ಚಿನ ಸಂಖ್ಯೆಯಲ್ಲಿ ಗೆದ್ದಿದ್ದಾರೆ. ಒಂದು ಕಡೆ ಪರಿಸ್ಥಿತಿ ಅತಂತ್ರವಾಗಿದೆ.

ಗಲಗಲಿಯಲ್ಲಿ ಮೇಲುಕೈ: ಬಾಗಲಕೋಟೆ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಗಾದಿಗಾಗಿ ಬಿಜೆಪಿಗೆ ಗೆಲುವು ಅನಿವಾರ್ಯವಾಗಿದ್ದ ಗಲಗಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು ಪಡೆ ದಿದ್ದು, ಬಿಜೆಪಿ ಮುಖಭಂಗ ಅನುಭವಿಸಿದೆ. ವೆಂಕನಗೌಡ ಪಾಟೀಲ ಅವರ ನಿಧನದಿಂದಾಗಿ ತೆರವುಗೊಂಡಿದ್ದ ಸ್ಥಾನಕ್ಕೆ ನಡೆದ ಉಪಚುನಾ ವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಗಿಯಪ್ಪ ದೇವನಾಳ 1247 ಮತಗಳ (ಪಡೆದದ್ದು 11583 ಮತ) ಅಂತರದಿಂದ ಜಯ ಗಳಿಸಿ ದರು. ಪರಾಜಿತ ಬಿಜೆಪಿ ಅಭ್ಯರ್ಥಿ ಚನ್ನಪ್ಪ ಜಮಖಂಡಿ 10336 ಮತ ಪಡೆದರು.

ಜೆಡಿಎಸ್-ಕಾಂಗ್ರೆಸ್ ಮೈತ್ರಿ ಲಾಭ: ರಾಯ ಚೂರು ಜಿಲ್ಲೆ ದೇವದುರ್ಗ ತಾಲೂಕಿನ ಕ್ಯಾದಿಗ್ಗೇರಾ ಜಿಲ್ಲಾ ಪಂಚಾಯಿತಿ ಕ್ಷೇತ್ರದ  ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಂದೀಪ ನಾಯಕ ೨೩೫೩ ಅಂತರದಿಂದ ಜಯ ಸಾಧಿಸಿದ್ದಾರೆ. ಜೆಡಿಎಸ್-ಕಾಂಗ್ರೆಸ್ ಮೈತ್ರಿ ಮಾಡಿಕೊಂಡ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಮಧ್ಯೆ ನೇರ ಹಣಾಹಣಿ ಏರ್ಪಟಿತ್ತು. ಬಿಜೆಪಿ ಅಭ್ಯರ್ಥಿ ಕೃಷ್ಟಪ್ಪ ನಾಯಕ 8529 ಮತಗಳನ್ನು ಪಡೆದರೆ, ಕಾಂಗ್ರೆಸ್ ಅಭ್ಯರ್ಥಿ ಸಂದೀಪ ನಾಯಕ 10 882  ಮತಗಳೂ ಪಡೆದರು. ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ ಐದು ಗ್ರಾಪಂಗಳಿಗೆ ಜೂನ್ 14 ರಂದು ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ಭಾನುವಾರ ಫಲಿತಾಂಶ ಪ್ರಕಟಗೊಂಡಿದೆ.

ಈ ಪೈಕಿ ಭೂಸನೂರ ಮತ್ತು ಹಿತ್ತಲಶಿರೂರ ಗ್ರಾಮ ಪಂಚಾಯ್ತಿಗಳಲ್ಲಿ ಕಾಂಗ್ರೆಸ್ ಬೆಂಬಲಿತರಿಗೆ ಸ್ಪಷ್ಟಬಹುಮತ ದೊರೆತಿದ್ದು ಅಧಿಕಾರ ಹಿಡಿಯುವ ಸಾಧ್ಯತೆ ಇದೆ. ಧುತ್ತರಗಾಂವ, ನಿರಗುಡಿ ಗ್ರಾಪಂನಲ್ಲಿ ಬಿಜೆಪಿ ಬೆಂಬಲಿತರಿಗೆ ಸ್ಪಷ್ಟಬಹುಮತ ದೊರೆತಿದ್ದು ಅಧಿಕಾರ ಹಿಡಿಯುವ ಸಾಧ್ಯತೆ ಇದೆ. ಇದೇವೇಳೆ ದಣ್ಣೂರು ಗ್ರಾಮ ಪಂಚಾಯಿತಿಯಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣವಾಗಿದೆ.

Follow Us:
Download App:
  • android
  • ios