ಬೆಂಗಳೂರು(ನ.02): ಕ್ರೀಡೆಯಲ್ಲಿ ಮಹತ್ತರ ಸಾಧನೆ ಮಾಡಿದ ಕರ್ನಾಟಕದ ಮೂವರು ಕ್ರೀಡಾಪಟುಗಳಾದ ವಿಶ್ವನಾಥ್ ಭಾಸ್ಕರ್ ಗಾಣಿಗ, ವಿ ಕುಟ್ಟಪ್ಪ ಹಾಗೂ ನಂದಿತಾ ನಾಗನಗೌಡರ್ ಅವರಿಗೆ ಶುಕ್ರವಾರ ಪ್ರಸಕ್ತ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಯಿತು.

"

ಕನ್ನಡ ರಾಜ್ಯೋತ್ಸವಕ್ಕೆ ನಿಮ್ಮ ನೆಚ್ಚಿನ ನಟರ ಶುಭಾಶಯ, ಯಶ್ ಖಡಕ್ ಡೈಲಾಗ್

ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ಕಾಮನ್‌ವೆಲ್ತ್ ಪವರ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ವಿಶ್ವನಾಥ್, 2 ಚಿನ್ನ, 2 ಬೆಳ್ಳಿಯೊಂದಿಗೆ ವಿಶ್ವ ದಾಖಲೆ ನಿರ್ಮಿಸಿದ್ದರು. ಭಾರತ ಬಾಕ್ಸಿಂಗ್ ತಂಡದ ಕೋಚ್ ಆಗಿರುವ ಚೇನಂಡ ಅಚ್ಚಯ್ಯ ಕುಟ್ಟಪ್ಪ ಹಾಗೂ ಏಷ್ಯಾ, ಯುರೋಪ್ ಮತ್ತು ಆಫ್ರಿಕಾ ಖಂಡಗಳಲ್ಲಿರುವ ಅತಿ ಎತ್ತರದ ಶಿಖರಗಳ ತುತ್ತ ತುದಿಯಲ್ಲಿ ಭಾರತದ ಧ್ವಜವನ್ನು ಹಾರಿಸಿರುವ ಪರ್ವತಾರೋಹಿ ಹುಬ್ಬಳ್ಳಿಯ ನಂದಿತಾ ನಾಗನಗೌಡರ ಅವರ ಕ್ರೀಡಾ ಸಾಧನೆ ಪರಿಗಣಿಸಿ ಪ್ರಶಸ್ತಿ ನೀಡಲಾಯಿತು.

ಕ್ರೀಡೆ ಮಾತ್ರವಲ್ಲದೇ ಸಾಹಿತ್ಯ, ಪತ್ರಿಕೋದ್ಯಮ, ಸಂಗೀತ ಹೀಗೆ ವಿವಿಧ ಕ್ಷೇತ್ರದಲ್ಲಿ ಮಹತ್ವದ ಸಾಧನೆ ಮಾಡಿದ ಒಟ್ಟು 62 ಸಾಧಕರನ್ನು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಗೌರವಿಸಿದರು.