ಇಂದಿನಿಂದ ಆಲ್ ಇಂಗ್ಲೆಂಡ್ ಬ್ಯಾಡ್ಮಿಂಟನ್ ಆರಂಭ; ಸಿಂಧು ಮೇಲೆ ನಿರೀಕ್ಷೆ
ಪ್ರತಿಷ್ಠಿತ ಅಲ್ ಇಂಗ್ಲೆಂಡ್ ಬ್ಯಾಡ್ಮಿಂಟನ್ ಟೂರ್ನಿಗೆ ಕ್ಷಣಗಣನೆ ಆರಂಭವಾಗಿದ್ದು, ಒಲಿಂಪಿಕ್ಸ್ ಪದಕ ವಿಜೇತೆ ಸಿಂಧು ಮೇಲೆ ಸಾಕಷ್ಟು ನಿರೀಕ್ಷೆಯಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
ಬರ್ಮಿಂಗ್‌ಹ್ಯಾಮ್(ಮಾ.17): ಪ್ರತಿಷ್ಠಿತ ಅಲ್ ಇಂಗ್ಲೆಂಡ್ ಬ್ಯಾಡ್ಮಿಂಟನ್ ಟೂರ್ನಿ ಬುಧವಾರದಿಂದ ಆರಂಭಗೊಳ್ಳಲಿದ್ದು, ವಿಶ್ವ ಚಾಂಪಿಯನ್ ಪಿ.ವಿ.ಸಿಂಧು ಹಾಗೂ ಕಿದಂಬಿ ಶ್ರೀಕಾಂತ್ ಭಾರತದ ಸವಾಲು ಮುನ್ನಡೆಸಲಿದ್ದಾರೆ. ಕಳೆದ ವಾರ ಸ್ವಿಸ್ ಓಪನ್ ಫೈನಲ್‌ನಲ್ಲಿ ಸೋಲುಂಡಿದ್ದ ಸಿಂಧು, ಇಲ್ಲಿ ಚೊಚ್ಚಲ ಪ್ರಶಸ್ತಿ ಗೆಲ್ಲಲು ಎದುರು ನೋಡುತ್ತಿದ್ದಾರೆ.
ಇದು ಟೋಕಿಯೋ ಒಲಿಂಪಿಕ್ಸ್ ಅರ್ಹತಾ ಟೂರ್ನಿ ಅಲ್ಲದ ಕಾರಣ, ಚೀನಾ, ಕೊರಿಯಾ ಹಾಗೂ ಚೈನೀಸ್ ತೈಪೆಯ ಶಟ್ಲರ್‌ಗಳು ಗೈರಾಗಲಿದ್ದಾರೆ. ಆದರೂ ಜಪಾನ್, ಇಂಡೋನೇಷ್ಯಾ, ಮಲೇಷ್ಯಾದ ಶಟ್ಲರ್‌ಗಳಿಂದ ಭಾರತೀಯರಿಗೆ ಪ್ರಬಲ ಪೈಪೋಟಿ ಎದುರಾಗಲಿದೆ. 1980ರಲ್ಲಿ ಪ್ರಕಾಶ್ ಪಡುಕೋಣೆ, 2001ರಲ್ಲಿ ಪುಲ್ಲೇಲಾ ಗೋಪಿಚಂದ್ ಬಿಟ್ಟರೆ ಭಾರತೀಯರಾರಯರೂ ಇಲ್ಲಿ ಪ್ರಶಸ್ತಿ ಜಯಿಸಿಲ್ಲ. ಸೈನಾ, 2015ರಲ್ಲಿ ರನ್ನರ್-ಅಪ್ ಆಗಿದ್ದರು. ಸಿಂಧು 2018ರಲ್ಲಿ ಸೆಮೀಸ್ ಪ್ರವೇಶಿಸಿದ್ದರು.
ಪುಲ್ಲೇಲಾ ಆಲ್ ಇಂಗ್ಲೆಂಡ್ ಚಾಂಪಿಯನ್ ಗರಿಗೆ 20 ವರ್ಷ; ಭಾರತದ ಬ್ಯಾಡ್ಮಿಂಟನ್‌ಗೆ ಹೊಸ ಸ್ವರ್ಶ!
ಪುರುಷರ ಸಿಂಗಲ್ಸ್, ಪುರುಷರ ಡಬಲ್ಸ್, ಮಹಿಳಾ ಸಿಂಗಲ್ಸ್, ಮಹಿಳಾ ಡಬಲ್ಸ್ ಹಾಗೂ ಮಿಶ್ರ ಡಬಲ್ಸ್ ಹೀಗೆ ಭಾರತ ಎಲ್ಲಾ 5 ವಿಭಾಗಗಳಲ್ಲಿ ಸ್ಪರ್ಧಿಸಲಿದ್ದು, ಉತ್ತಮ ಪ್ರದರ್ಶನ ತೋರುವ ವಿಶ್ವಾಸದಲ್ಲಿದೆ.