ಕೊರೋನಾ ನಡುವೆಯೇ ಆಲ್ ಇಂಗ್ಲೆಂಡ್ ಬ್ಯಾಡ್ಮಿಂಟನ್
ಆಲ್ ಇಂಗ್ಲೆಂಡ್ ಟೂರ್ನಿಯಲ್ಲಿ ಸೈನಾ ನೆಹ್ವಾಲ್, ಪಿ.ವಿ. ಸಿಂಧು ಹಾಗೂ ಕಿದಂಬಿ ಶ್ರೀಕಾಂತ್ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ. ಈ ಕುರಿತಾದ ವಿವರ ಇಲ್ಲಿದೆ ನೋಡಿ.
ಬರ್ಮಿಂಗ್‌ಹ್ಯಾಂ(ಮಾ.11): ವಿಶ್ವದ ಪ್ರತಿಷ್ಠಿತ ಬ್ಯಾಡ್ಮಿಂಟನ್ ಟೂರ್ನಿಗಳಲ್ಲಿ ಒಂದಾದ ಆಲ್ ಇಂಗ್ಲೆಂಡ್ ಬ್ಯಾಡ್ಮಿಂಟನ್ ಚಾಂಪಿಯನ್‌ಷಿಪ್ ಬುಧವಾರದಿಂದ ಆರಂಭಗೊಳ್ಳಲಿದ್ದು, ಭಾರತದ ಖ್ಯಾತ ತಾರೆಗಳಾದ ಪಿ.ವಿ.ಸಿಂಧು ಮತ್ತು ಸೈನಾ ನೆಹ್ವಾಲ್ ಪ್ರಶಸ್ತಿ ಗೆಲ್ಲುವ ಫೇವರಿಟ್‌ಗಳ ಸಾಲಿನಲ್ಲಿದ್ದಾರೆ.
ಬ್ಯಾಡ್ಮಿಂಟನ್ ಅಂಗಳದಿಂದ ಬಾಲಿವುಡ್ ಆಕಾಶಕ್ಕೆ ಕನ್ನಡತಿ ದೀಪಿಕಾ ಪಡುಕೋಣೆ!
ಆದರೆ ವಿಶ್ವದೆಲ್ಲೆಡೆ ಅತಿ ವೇಗದಲ್ಲಿ ಹರಡುತ್ತಿರುವ ಕೊರೋನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಟೂರ್ನಿಯನ್ನು ನಡೆಸುವುದರ ಬಗ್ಗೆ ಇನ್ನೂ ಅನುಮಾನ ಇದ್ದೇ ಇದೆ. ಇಂಗ್ಲೆಂಡ್‌ನಲ್ಲಿ ಈಗಾಗಲೇ 300 ಮಂದಿಗೆ ಮಾರಕ ಕೊರೋನಾ ಸೋಂಕು ತಗಲಿರುವುದು ದೃಢಪಟ್ಟಿದ್ದು, ಐದು ಮಂದಿ ಸಾವಿಗೀಡಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಇದೇ ಟೂರ್ನಿಯಲ್ಲಿ ಪಾಲ್ಗೊಳ್ಳಬೇಕಿದ್ದ 10ಕ್ಕೂ ಹೆಚ್ಚು ಶಟ್ಲರ್‌ಗಳು ಟೂರ್ನಿಯಿಂದ ಹಿಂದಕ್ಕೆ ಸರಿದಿದ್ದಾರೆ. ಆದರೂ ಆಲ್ ಇಂಗ್ಲೆಂಡ್ ಬ್ಯಾಡ್ಮಿಂಟನ್ ಟೂರ್ನಿಯ ಆಯೋಜಕರು ಟೂರ್ನಿ ನಿಲ್ಲಿಸುವ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
ಸ್ಪೇನ್ ಮಾಸ್ಟರ್ಸ್ ಟೂರ್ನಿ: ಸೈನಾ ನೆಹ್ವಾಲ್ ಔಟ್
ಟೋಕಿಯೋ ಒಲಿಂಪಿಕ್ಸ್ ಕ್ರೀಡಾಕೂಟಕ್ಕೆ ಅರ್ಹತೆ ಗಿಟ್ಟಿಸಿಕೊಳ್ಳಲು ಸೈನಾ ನೆಹ್ವಾಲ್ ಹಾಗೂ ಕಿದಂಬಿ ಶ್ರೀಕಾಂತ್ ಪಾಲಿಗೆ ಕೊನೆಯ ಅವಕಾಶ ಎನಿಸಿದೆ. ಈ ಟೂರ್ನಿಯಲ್ಲಿ ಕ್ವಾರ್ಟರ್ ಫೈನಲ್ ಪ್ರವೇಶಿಸಿದರೆ ಈ ಇಬ್ಬರು ಬ್ಯಾಡ್ಮಿಂಟನ್ ಪಟುಗಳು ಒಲಿಂಪಿಕ್ಸ್ ಭಾಗವಹಿಸುವ ಆಸೆ ಸಫಲವಾಗಲಿದೆ.
ಕೊರೋನಾ ವೈರಸ್ ಆತಂಕ; ಭಾರತೀಯ ಕ್ರೀಡೆಗೆ ತಟ್ಟಿದ ಬಿಸಿ!
ಅತ್ಯಂತ ಹಳೆಯ ಬ್ಯಾಡ್ಮಿಂಟನ್ ಟೂರ್ನಿಗಳಲ್ಲಿ ಒಂದೆನಿಸಿರುವ ಆಲ್ ಇಂಗ್ಲೆಂಡ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಇದುವರೆಗು ಭಾರತದ ಇಬ್ಬರು ಬ್ಯಾಡ್ಮಿಂಟನ್ ದಿಗ್ಗಜರು ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ. ಪ್ರಕಾಶ್ ಪಡುಕೋಣೆ ಹಾಗೂ ಪುಲ್ಲೇಲಾ ಗೋಪಿಚಂದ್ ಇದುವರೆಗೂ ಚಾಂಪಿಯನ್ ಪಟ್ಟ ಅಲಂಕರಿಸಿದ್ದಾರೆ.