Asianet Suvarna News Asianet Suvarna News

ಕುಸ್ತಿಪಟುಗಳ ಪ್ರೊಟೆಸ್ಟ್‌ ಅಂತ್ಯ : ಅಮಿತ್‌ ಶಾ ಸಂಧಾನದ ಬಳಿಕ ಪ್ರತಿಭಟನೆ ಕೈಬಿಟ್ಟ ಕ್ರೀಡಾಳುಗಳು

ಖ್ಯಾತ ಕುಸ್ತಿಪಟು ಸಾಕ್ಷಿ ಮಲಿಕ್‌ ಪ್ರತಿಭಟನೆ ಕೈಬಿಟ್ಟು ಭಾರತೀಯ ರೈಲ್ವೆಯಲ್ಲಿ ಉದ್ಯೋಗಿಯೂ ಅಗಿರುವ ತನ್ನ ಕೆಲಸಕ್ಕೆ ಹಾಜರಾಗಿದ್ದಾರೆ. ಇದೇ ರೀತಿ, ಇತರೆ ಇಬ್ಬರು ಕುಸ್ತಿಪಟುಗಳು ಸಹ ತಮ್ಮ ಸರ್ಕಾರಿ ಕೆಲಸಕ್ಕೆ ಹಾಜರಾಗಿದ್ದಾರೆ ಎಂದು ತಿಳಿದುಬಂದಿದೆ.

all three wrestlers ends protest and resumes duty after meeting amit shah ash
Author
First Published Jun 5, 2023, 2:39 PM IST

ನವದೆಹಲಿ (ಜೂನ್ 5, 2023):  ಕುಸ್ತಿಪಟುಗಳ ಸಂಘದ ಮುಖ್ಯಸ್ಥ ಬ್ರಿಜ್‌ ಭೂಷಣ್‌ ಸಿಂಗ್‌ ವಿರುದ್ಧ ನಡೆಯುತ್ತಿದ್ದ ಕುಸ್ತಿಪಟುಗಳ ಪ್ರತಿಭಟನೆ ಅಂತ್ಯವಾಗಿದೆ. ಖ್ಯಾತ ಕುಸ್ತಿಪಟು ಸಾಕ್ಷಿ ಮಲಿಕ್‌, ವಿನೇಶ್‌ ಫೋಗಟ್‌ ಹಾಗೂ ಭಜರಂಗ್‌ ಪುನಿಯಾ ಸಹ ತಮ್ಮ ಪ್ರತಿಭಟನೆ ಕೈಬಿಟ್ಟಿದ್ದಾರೆ. ಪ್ರತಿಭನಾ ಕಾವು ಹೆಚ್ಚಾಗುತ್ತಿದ್ದ ಬೆನ್ನಲ್ಲೇ ಈ ಆಶ್ಚರ್ಯಕರ ಬೆಳವಣಿಗೆ ನಡೆದಿದೆ. 

ಖ್ಯಾತ ಕುಸ್ತಿಪಟು ಸಾಕ್ಷಿ ಮಲಿಕ್‌ ಪ್ರತಿಭಟನೆ ಕೈಬಿಟ್ಟು ಭಾರತೀಯ ರೈಲ್ವೆಯಲ್ಲಿ ಉದ್ಯೋಗಿಯೂ ಅಗಿರುವ ತನ್ನ ಕೆಲಸಕ್ಕೆ ಹಾಜರಾಗಿದ್ದಾರೆ. ಇದೇ ರೀತಿ, ಇತರೆ ಇಬ್ಬರು ಕುಸ್ತಿಪಟುಗಳು ಸಹ ತಮ್ಮ ಸರ್ಕಾರಿ ಕೆಲಸಕ್ಕೆ ಹಾಜರಾಗಿದ್ದಾರೆ ಎಂದು ತಿಳಿದುಬಂದಿದೆ. ಈ ಮೂಲಕ ಹಲವು ತಿಂಗಳುಗಳಿಂದ ನಡೆಯುತ್ತಿರುವ ಕುಸ್ತಿಪಟುಗಳ ಪ್ರತಿಭಟನೆ ಅಂತ್ಯವಾಗಿದೆ. ಕೇಂದ್ರ ಗೃಹ ಸಚಿವ ಅಮಿತ್‌ ಶಾ ಭೇಟಿಯಾದ 2 ದಿನಗಳ ಬಳಿಕ ಈ ಬೆಳವಣಿಗೆ ನಡೆದಿದೆ ಎಂಬುದೂ ಗಮನಾರ್ಹ. 

ಇದನ್ನು ಓದಿ: Wrestlers Protest: ಕುಸ್ತಿ​ಪ​ಟು​ಗಳನ್ನು ಬೆಂಬ​ಲಿ​ಸಿ ಮತ್ತೆ ಮಹಾ​ಪಂಚಾ​​ಯ​ತ್‌

ಭಾರತೀಯ ಕುಸ್ತಿ ಒಕ್ಕೂಟದ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧದ ಪ್ರತಿಭಟನೆಯಲ್ಲಿ ಮುಂಚೂಣಿಯಲ್ಲಿದ್ದ ಭಾರತದ ಕುಸ್ತಿಪಟುಗಳಾದ ಸಾಕ್ಷಿ ಮಲಿಕ್, ವಿನೇಶ್ ಫೋಗಟ್ ಮತ್ತು ಬಜರಂಗ್ ಪುನಿಯಾ ಅವರು ರೈಲ್ವೆಯಲ್ಲಿ ತಮ್ಮ ಕರ್ತವ್ಯವನ್ನು ಪುನರಾರಂಭಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರತಿಭಟಿಸುವ ಕುಸ್ತಿಪಟುಗಳನ್ನು ದೆಹಲಿಯ ಜಂತರ್ ಮಂತರ್‌ನಿಂದ ಹೊರಹಾಕಿದ ಕೆಲವು ದಿನಗಳ ನಂತರ ಮೇ 31 ರಂದು ಸಾಕ್ಷಿ ಮಲಿಕ್, ವಿನೇಶ್ ಫೋಗಟ್ ಮತ್ತು ಬಜರಂಗ್ ಪುನಿಯಾ ತಮ್ಮ ಕೆಲಸವನ್ನು ಪುನಾರಂಭಿಸಿದ್ದಾರೆ. ಅಲ್ಲಿ ಅವರು ಏಪ್ರಿಲ್‌ನಿಂದ ಪ್ರತಿಭಟನೆ ನಡೆಸುತ್ತಿದ್ದರು. ಕುಸ್ತಿಪಟುಗಳು ಶನಿವಾರ ಸಂಜೆ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಅಪ್ರಾಪ್ತ ವಯಸ್ಕ ಸೇರಿದಂತೆ 7 ಮಹಿಳಾ ಕುಸ್ತಿಪಟುಗಳಿಂದ ಲೈಂಗಿಕ ಕಿರುಕುಳದ ಆರೋಪ ಹೊತ್ತಿರುವ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ನಿಷ್ಪಕ್ಷಪಾತ ತನಿಖೆಗೆ ಮನವಿ ಮಾಡಿದರು.

ಇದನ್ನೂ ಓದಿ: Wrestlers Protest: ಕುಸ್ತಿಪಟುಗಳಿಗೆ ನ್ಯಾಯ ಸಿಗಲಿ, ಶೀಘ್ರ ಚಾರ್ಜ್​ಶೀ​ಟ್‌ ಸಲ್ಲಿ​ಕೆ: ಅನುರಾಗ್ ಠಾಕೂರ್

ನಂತರ, ಕಾನೂನು ಎಲ್ಲರಿಗೂ ಒಂದೇ ಆಗಿರುತ್ತದೆ ಎಂದು ಅಮಿತ್ ಶಾ ಕುಸ್ತಿಪಟುಗಳಿಗೆ ಭರವಸೆ ನೀಡಿದರು. "ಕಾನೂನು ತನ್ನದೇ ಆದ ಕ್ರಮವನ್ನು ತೆಗೆದುಕೊಳ್ಳಲಿ" ಎಂದೂ ಅವರು ಕುಸ್ತಿಪಟುಗಳಿಗೆ ಹೇಳಿದರು. ಕುಸ್ತಿ ಫೆಡರೇಶನ್ ಮುಖ್ಯಸ್ಥರ ವಿರುದ್ಧ ಕ್ರಮಕ್ಕೆ ಐದು ದಿನಗಳ ಗಡುವು ಶನಿವಾರ ಕೊನೆಗೊಂಡ ನಂತರ ಪ್ರತಿಭಟನಾ ನಿರತ ಕುಸ್ತಿಪಟುಗಳು ಅಮಿತ್‌ ಶಾ ಅವರನ್ನು ಭೇಟಿಯಾಗಲು ಕೋರಿದ್ದರು ಎಂದು ಮೂಲಗಳು ಹೇಳುತ್ತವೆ.

ಕುಸ್ತಿ ಒಕ್ಕೂಟದ ಮುಖ್ಯಸ್ಥರ ವಿರುದ್ಧದ ತಮ್ಮ ಪ್ರತಿಭಟನೆಯನ್ನು ಹೆಚ್ಚಾಗಿ ನಿರ್ಲಕ್ಷಿಸಲಾಗಿದೆ ಎಂದು ಆರೋಪಿಸಿರುವ ಕುಸ್ತಿಪಟುಗಳು, ಕಳೆದ ತಿಂಗಳು ತಮ್ಮ ಪದಕಗಳನ್ನು ಹರಿದ್ವಾರದಲ್ಲಿ ಗಂಗಾ ನದಿಯಲ್ಲಿ ಎಸೆಯುವ ನಿರ್ಧಾರ ಮಾಡಿದ್ದರು. ಆದರೆ, ರೈತ ಮುಖಂಡ ನರೇಶ್ ಟಿಕಾಯತ್ ಅವರ ಮಧ್ಯಸ್ಥಿಕೆಯ ನಂತರ ಅವರು ತಮ್ಮ ಪ್ಲ್ಯಾನ್‌ ಅನ್ನು ಕೈಬಿಟ್ಟಿದ್ದರು.

all three wrestlers ends protest and resumes duty after meeting amit shah ash

ಆದರೆ, ಈ ನಡುವೆ ಸಾಕ್ಷಿ ಮಲಿಕ್‌ ಹಾಗೂ ಭಜರಂಗ್ ಪುನಿಯಾ ಟ್ವೀಟ್‌ ಮಾಡಿದ್ದು, ಪ್ರತಿಭಟನೆ ಕೈಬಿಟ್ಟಿದ್ದರೂ ನ್ಯಾಯ ಸಿಗುವವರೆಗೆ ನಮ್ಮ ಹೋರಾಟ ಮುಂದುವರಿಯುತ್ತದೆ. ಪ್ರತಿಭಟನೆಗೆ ನೈತಿಕ ಬೆಂಬಲ ಇದ್ದೇ ಇರುತ್ತದೆ,  ಎಂದು ಟ್ವೀಟ್‌ಗಳ ಮೂಲಕ ಹೇಳಿಕೊಂಡಿದ್ದಾರೆ. ಇವರಿಬ್ಬರೂ ಭಾರತೀಯ ರೈಲ್ವೆ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಇದನ್ನೂ ಓದಿ: Wrestlers Protest: 1983ರ ಏಕದಿನ ವಿಶ್ವಕಪ್‌ ವಿಜೇತ ತಂಡದ ಬೆಂಬ​ಲ 

Follow Us:
Download App:
  • android
  • ios